ಎಸ್‌ಎಸ್‌ಬಿಯಲ್ಲಿ ಕಾನ್‌ಸ್ಟೆಬಲ್‌ ಹುದ್ದೆಗೆ ನೇಮಕಾತಿ ಪ್ರಕಟ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

SSB Recruitment 2026: ಸಶಸ್ತ್ರ ಸೀಮಾ ಬಲ (SSB) ವಿವಿಧ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 1,060 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

SSB Recruitment 2026: ದೇಶದ ರಕ್ಷಣೆಯಲ್ಲಿ ತಮ್ಮದೂ ಒಂದು ಕೊಡುಗೆ ನೀಡಬೇಕೆಂಬ ಕನಸು ಹೊತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. ಗೃಹ ಸಚಿವಾಲಯದ ಅಧೀನದಲ್ಲಿರುವ ಸಶಸ್ತ್ರ ಸೀಮಾ ಬಲ (SSB) ವಿವಿಧ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 1,060 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ 827 ಕಾನ್‌ಸ್ಟೆಬಲ್‌ ಮತ್ತು 233 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳು ಸೇರಿವೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ ಆಗಿರುತ್ತದೆ ಮತ್ತು ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ವೆಬ್‌ಸೈಟ್‌ಗೆ ssbrectt.gov.in ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ನಮೂನೆಗಳನ್ನು ಭರ್ತಿ ಮಾಡಬಹುದು.ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಇರಬೇಕಾದ ಅರ್ಹತೆಗಳೇನು? ಇಲ್ಲಿದೆ ಓದಿ.

ಹುದ್ದೆಯ ವಿವರ

ಈ ನೇಮಕಾತಿಯಲ್ಲಿ ಎಸ್‌ಎಸ್‌ಬಿ 1,060 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅದರಲ್ಲಿ 827 ಕಾನ್‌ಸ್ಟೆಬಲ್‌ ಹುದ್ದೆ ಮತ್ತು 233 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳು ಸೇರಿವೆ.

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ (ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು. ಕಾನ್ಸ್‌ಟೇಬಲ್ (ಚಾಲಕ) ಹುದ್ದೆಗೆ ಅಭ್ಯರ್ಥಿಗಳು ಹೆವಿ ವೆಹಿಕಲ್‌ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ತಾಂತ್ರಿಕ ಹುದ್ದೆಗಳಿಗೆ ಐಟಿಐ ಪ್ರಮಾಣಪತ್ರ ಅಥವಾ ಸಂಬಂಧಿತ ವ್ಯಾಪಾರದಲ್ಲಿ ಕೆಲಸದ ಅನುಭವದ ಅಗತ್ಯವಿದೆ.

ವಯೋಮಿತಿ

ಈ ಹುದ್ದೆಗಳಿಗೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷಗಳು. ಹುದ್ದೆಯನ್ನು ಅವಲಂಬಿಸಿ ವಯೋಮಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬಹುದು. ಸರ್ಕಾರಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳಿಗೆ (OBC) ಸೇರಿದ ಅಭ್ಯರ್ಥಿಗಳಿಗೆ ವಿಶೇಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ರೈಲ್ವೆ ನೇಮಕಾತಿಯಿಂದ ಅತಿದೊಡ್ಡ ಘೋಷಣೆ: 11,127 ಅಸಿಸ್ಟಂಟ್‌ ಲೊಕೊ ಪೈಲಟ್‌ ಹುದ್ದೆಗಳ ಭರ್ತಿ, ಈ ದಿನಾಂಕಗಳನ್ನು ಗಮನಿಸಿ

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿದ್ದರೆ, ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಂಪೂರ್ಣವಾಗಿ ಉಚಿತವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು SSB ನೇಮಕಾತಿ ವೆಬ್‌ಸೈಟ್ ssbrectt.gov.in ಗೆ ಭೇಟಿ ನೀಡಿ ‘ಅರ್ಜಿ ಸಲ್ಲಿಸಿ’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಅಲ್ಲಿ, ನೀವು ನಿಮ್ಮ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ದಾಖಲೆ, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ನಿಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ ಅದರ ಮುದ್ರಣವನ್ನು ತೆಗೆದುಕೊಳ್ಳಲು ಮರೆಯಬಾರದು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.