ಉಡುಪಿ : ಟ್ರೆಡಿಂಗ್ ಆ್ಯಪ್ ಹೆಸರಿನಲ್ಲಿ 11.75 ಲಕ್ಷ ರೂಪಾಯಿ ವಂಚನೆ

ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ಸಹನಾ ಎಂಬುವವರು ಹಂತ ಹಂತವಾಗಿ ಒಟ್ಟು 11,75,000 ಸಾವಿರ ರೂ. ಕಳೆದುಕೊಂಡಿದ್ದಾರೆ.

ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಟ್ರೆಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು. ಸುಮಾರು 15 ದಿನಗಳ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಅವರನ್ನು ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾನೆ. ಆ ಗುಂಪಿನಲ್ಲಿ ಲಿಂಕ್ ಕಳುಹಿಸಿ, ಕೆವೈಸಿ ವಿವರಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ಬಳಿಕ ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಸಹನಾ ಅವರು ಮಾರ್ಚ್ 6ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 11,75,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸ್ಪಷ್ಟನೆ

ಆದರೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿಗಳು ಯಾವುದೇ ಲಾಭಾಂಶ ನೀಡದೇ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories