ಸೌಜನ್ಯ ಕೇಸ್‌ಗೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ ?
2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯ ನಂತರ ಈಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.
ನವದೆಹಲಿ : ಕರ್ನಾಟಕವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ನಡೆದ ಸುಮಾರು 14 ವರ್ಷಗಳೇ ಕಳೆದಿದೆ. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.
ಏನಿದು ಸೌಜನ್ಯ ಪ್ರಕರಣ ?
2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯ ನಂತರ ಈಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.
ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿದ್ದರು. ನಂತರದಲ್ಲಿ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಸಂತೋಷ್ ರಾವ್ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆತನನನ್ನು ಬಂಧಿಸಲಾಗಿತ್ತು. ಆದರೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷಾಧಾರಗಳ ಕೊರತೆಯಿಂದ ಸಂತೋಷ್ ರಾವ್‌ನನ್ನು ನಿರ್ಧೋಷಿ ಎಂದು ತೀರ್ಪು ನೀಡಿತ್ತು.
Also Read : ಉಡುಪಿ : ಟ್ರೆಡಿಂಗ್ ಆ್ಯಪ್ ಹೆಸರಿನಲ್ಲಿ 11.75 ಲಕ್ಷ ರೂಪಾಯಿ ವಂಚನೆ
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿದೆ. “ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್ ಆದೇಶದಲ್ಲೇನಿದೆ ?
ಸೌಜನ್ಯ ಕುಟುಂಬದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ, ಪ್ರಕರಣದಲ್ಲಿ ತನಿಖೆಯ ವರದಿಯನ್ನು ಸಲ್ಲಿಸುವಂತೆ ಹೇಳಿದೆ. ಮಾತ್ರವಲ್ಲ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಾಗಿರುವ ಸಿಬಿಐಗೆ ನೋಟೀಸ್ ಜಾರಿ ಮಾಡಿದೆ.
Also read: ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸ್ಪಷ್ಟನೆ
soujanya case supreme court order kannada News



