ಹೋಟೆಲ್ ಮಾಲೀಕರ ಗ್ಯಾಸ್ ಸಮಸ್ಯೆಗೆ ಕೊನೆಗೂ ಪರಿಹಾರ : ಗ್ಯಾಸ್ ಪೂರೈಕೆ ಪ್ರಮಾಣದಲ್ಲಿ ಏರಿಕೆಗೆ ಕೇಂದ್ರದ ಅಸ್ತು
ಹೋಟೆಲ್ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಹೋಟೆಲ್ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಕಳೆದ 12 ದಿನಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಇಲ್ಲದೇ ಸಂಕಷ್ಟ ಅನುಭವಿಸುತ್ತಿದ್ದ ಹೋಟೆಲ್ ಮಾಲೀಕರಿಗೆ ಕೊನೆಗೂ ಪರಿಹಾರ ದೊರಕಿದೆ.
ಹೋಟೆಲ್ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಹೋಟೆಲ್ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರಿನ ಹೋಟೆಲ್ಗಳಿಗೆ ಅತೀ ಕಡಿಮೆ ಪ್ರಮಾಣದಲ್ಲಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಅಸಮಾಧಾನ ಹೊರಹಾಕುತ್ತಲೇ ಬಂದಿತ್ತು. ಅಲ್ಲದೇ ಈ ಸಂಬಂಧ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿತ್ತು. ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕೇಂದ್ರ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ: ಗ್ಯಾಸ್ ಬುಕ್ಕಿಂಗ್ ಚಿಂತೆ ಬಿಡಿ: ಕೇವಲ ಒಂದು ನಿಮಿಷದಲ್ಲಿ ಸಿಲಿಂಡರ್ ಕಾಯ್ದಿರಿಸಲು ಇಲ್ಲಿದೆ ಸುಲಭ ದಾರಿ
ಕೇಂದ್ರ ಪೆಟ್ರೋಲಿಯಂ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಯುದ್ಧಪೂರ್ವ ಕಾಲದಲ್ಲಿ ಪೂರೈಕೆ ಮಾಡಲಾಗುತ್ತಿದ್ದ ಸಿಲಿಂಡರ್ನ 50 ಪ್ರತಿಶತ ಸಿಲಿಂಡರ್ ಪೂರೈಕೆಗೆ ಆದೇಶಿಸಲಾಗಿದೆ. ಕೇಂದ್ರ ಸರ್ಕಾರದ ಈ ಆದೇಶದಿಂದಾಗಿ ಸಂಪೂರ್ಣ ನೆಲಕಚ್ಚಿದ್ದ ಹೋಟೆಲ್ ಉದ್ಯಮಕ್ಕೆ ಮರಭೂಮಿಯಲ್ಲಿ ಒಯಿಸಿಸ್ ದೊರಕಿದಂತೆ ಆಗಿದೆ.



