ದಲಿತ ವ್ಯಕ್ತಿಯು ಅನ್ಯ ಧರ್ಮಕ್ಕೆ ಮತಾಂತರಗೊಂಡರೆ ಎಸ್ಸಿ,ಎಸ್ಟಿ ಸ್ಥಾನಮಾನ ರದ್ದು : ಸುಪ್ರೀಂಕೋರ್ಟ್
supreme court : ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಬಳಿಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಯ್ದೆಯಡಿಯಲ್ಲಿ ನ್ಯಾಯ ಕೇಳಬಾರದು ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಮನಮೋಹನ್ ಅವರ ನೇತೃತ್ವದ ಪೀಠವು ಹೇಳಿದೆ.
ಬೆಂಗಳೂರು : ಹಿಂದೂ, ಬೌದ್ಧ ಹಾಗೂ ಸಿಖ್ಖ ಧರ್ಮಕ್ಕೆ ಸೇರಿದವರು ಮಾತ್ರ ಪರಿಶಿಷ್ಠ ಜಾತಿಯ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡತಹ ವ್ಯಕ್ತಿಯು ಪರಿಶಿಷ್ಟ ಜಾತಿಯ ಸ್ಥಾನಮಾನ ಕೇಳುವಂತಿಲ್ಲ ಎಂದು ಸುಪ್ರೀಂಕೋರ್ಟ್ (supreme court) ಆದೇಶ ನೀಡಿದೆ. ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಬಳಿಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಯ್ದೆಯಡಿಯಲ್ಲಿ ನ್ಯಾಯ ಕೇಳಬಾರದು ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಮನಮೋಹನ್ ಅವರ ನೇತೃತ್ವದ ಪೀಠವು ಹೇಳಿದೆ.
ಹಿಂದೂ, ಬೌದ್ಧ ಹಾಗೂ ಸಿಖ್ ಧರ್ಮಕ್ಕೆ ಸೇರಿದ ವ್ಯಕ್ತಿ ಮಾತ್ರ ಪರಿಶಿಷ್ಟ ಜಾತಿ ಮೀಸಲಾತಿಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಈ ಧರ್ಮಗಳನ್ನು ಬಿಟ್ಟು ಇನ್ನಿತರ ಯಾವುದೇ ಧರ್ಮಕ್ಕೆ ಸೇರ್ಪಡೆಗೊಂಡರೂ ಸಹ ಅವರಿಗೆ ಪರಿಶಿಷ್ಠ ಜಾತಿ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
2025ರ ಮೇ ತಿಂಗಳಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಚಿಂತಾಂಡ ಆನಂದ್ ಎಂಬ ಪಾದ್ರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಕಲ ರಾಮಿರೆಡ್ಡಿ ಸೇರಿದಂತೆ ಕೆಲವರಿಂದ ತಮಗೆ ಜಾತಿ ನಿಂದನೆಯಾಗಿದೆ ಎಂದು ಆರೋಪಿಸಿ ಅವರ ವಿರುದ್ಧ ಎಸ್ಸಿ/ ಎಸ್ಟಿ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಕೇರಳ ಚುನಾವಣೆ 2026 : ಪಿಣರಾಯಿ ವಿಜಯನ್ ಹ್ಯಾಟ್ರಿಕ್ ಗೆಲುವೋ ಅಥವಾ ಕಾಂಗ್ರೆಸ್ ಕಮ್‌ಬ್ಯಾಕ್ ?
ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಹೀಗಾಗಿ ಅವರು ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಈ ಪ್ರಕರಣ ರದ್ದುಗೊಳಿಸುವಂತೆ ಕೋರಿ ರಾಮಿರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಆಲಿಸಿದ ಆಂಧ್ರಪ್ರದೇಶ ಹೈಕೋರ್ಟ್, ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಬಳಿಕ ಪರಿಶಿಷ್ಠ ಜಾತಿ ಸ್ಥಾನಮಾನ ಕಳೆದುಕೊಂಡಿದ್ದಾರೆ. ಹೀಗಾಗಿ ಇವರಿಗೆ ಎಸ್ಸಿ/ ಎಸ್ಟಿ ಕಾಯ್ದೆಯ ಅಡಿಯಲ್ಲಿ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಇದಾದ ಬಳಿಕ ಆನಂದ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ಕೂಡ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ ಆದೇಶವನ್ನು ಎತ್ತಿಹಿಡಿದಿದೆ.



