ಗ್ಯಾಸ್​ ಬುಕ್ಕಿಂಗ್​ ಅವಧಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಕೇಂದ್ರ ಸರ್ಕಾರದಿಂದ ಹೊರಬಿತ್ತು ಸ್ಪಷ್ಟನೆ

ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ ದೇಶದಲ್ಲಿ ಎಲ್​ಪಿಜಿ ಸಿಲಿಂಡರ್​ಗಳಿಗೆ ಅಭಾವ ಸೃಷ್ಟಿಯಾಗಿದೆ. ಈ ನಡುವೆ ಸಿಲಿಂಡರ್​ಗಳ ಮರಪೂರಣ ಅವಧಿಯಲ್ಲಿಯೂ ವಿಸ್ತರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು.

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ ದೇಶದಲ್ಲಿ ಎಲ್​ಪಿಜಿ ಸಿಲಿಂಡರ್​ಗಳಿಗೆ ಅಭಾವ ಸೃಷ್ಟಿಯಾಗಿದೆ. ಈ ನಡುವೆ ಸಿಲಿಂಡರ್​ಗಳ ಮರಪೂರಣ ಅವಧಿಯಲ್ಲಿಯೂ ವಿಸ್ತರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಇದು ಸಾರ್ವಜನಿಕರ ಅನುಮಾನಗಳಿಗೆ ಮತ್ತಷ್ಟು ಇಂಬು ನೀಡಿದೆ.

ಆದರೆ ಇದೀಗ ಈ ಎಲ್ಲಾ ವರದಿಗಳನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದ್ದು, ಎಲ್​ಪಿಜಿ ಮರುಪೂರಣದ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗೂ ನಿಗದಿತ ಸಮಯದ ಮಿತಿಯಲ್ಲೇ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪುನರುಚ್ಛರಿಸಿದೆ.

ಎಲ್​ಪಿಜಿ ಮರುಪೂರಣ ಬುಕ್ಕಿಂಗ್​ ಸಮಯಸೂಚಿಯಲ್ಲಿ ಬದಲಾವಣೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವರದಿ ಸುಳ್ಳು ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟನೆ ನೀಡಿದೆ.

ಈ ವರದಿಗಳಿಗೆ ಯಾವುದೇ ಆಧಾರವಿಲ್ಲ. ದೇಶದಲ್ಲಿ ಸಾಕಷ್ಟು ಎಲ್​ಪಿಜಿ ಸರಬರಾಜು ಇದ್ದು ನಾಗರಿಕರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಅನಗತ್ಯ ಆತಂಕವನ್ನು ಸೃಷ್ಠಿಸುವಂತಹ ಇಂತಹ ಸುದ್ದಿಗಳಿಗೆ ಕಿವಿಗೊಡಬೇಡಿ . ಎಲ್​ಪಿಜಿ ಪೂರೈಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಲ್ಲದೇ ಎಲ್​ಪಿಜಿ ಅಭಾವವಾಗಬಹುದು ಎಂಬ ಆತಂಕದಲ್ಲಿ ಅನಗತ್ಯ ಸಿಲಿಂಡರ್​ ಬುಕ್ಕಿಂಗ್​ ಮಾಡುವ ಅಗತ್ಯ ಕೂಡ ಇಲ್ಲ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ದೇಶದ ಜನತೆಗೆ ಕರೆ ನೀಡಿದೆ.

Also Read: ದೇಶದ ಪ್ರಮುಖ ನಗರಗಳಲ್ಲಿ ತೈಲೋತ್ಪನ್ನಗಳ ಕೊರತೆ : ಎಲ್ಲೆಲ್ಲೂ ‘ನೋ ಸ್ಟಾಕ್​’ ಬೋರ್ಡ್

ಇಂಡಿಯನ್​ ಆಯಿಲ್​ ಕೂಡ ತನ್ನ ಅಧಿಕೃತ ಖಾತೆಯಲ್ಲಿ ಈ ವಿಚಾರವಾಗಿ ಮಾಹಿತಿ ಹಂಚಿಕೊಂಡಿದ್ದು, ಎಲ್​ಪಿಜಿ ಮರುಪೂರಣ ಬುಕ್ಕಿಂಗ್​ ಸಮಯಸೂಚಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯವಾಗಿದೆ.

ಈ ಹಿಂದಿನಂತೆಯೇ ನಗರ ಪ್ರದೇಶಗಳಿಗೆ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ಮಿತಿಯನ್ನೇ ನಿಗದಿಪಡಿಸಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ದೇಶಾದ್ಯಂತ ಎಲ್​ಪಿಜಿ ಸರಬರಾಜಿನಲ್ಲೂ ಯಾವುದೇ ಬದಲಾವಣೆ ಇಲ್ಲ. ಹೀಗಾಗಿ ಅನಗತ್ಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬರೆಯಲಾಗಿದೆ.

No change in gas booking period Clarification issued by Central Govt

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories