ಉಡುಪಿಯಲ್ಲಿ ಮಟ್ಕಾ ದಂಧೆ : ಹಿರಿಯಡ್ಕ-ಮಲ್ಪೆಯಲ್ಲಿ ಆರೋಪಿಗಳ ಬಂಧನ

ಕರಾವಳಿಯಲ್ಲಿ ಮಟ್ಕಾ ದಂಧೆ ಮಿತಿಮೀರಿದೆ. ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರಿದಿದೆ. ಹಿರಿಯಡ್ಕ ಮತ್ತು ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜೂಜಾಟ ನಡೆಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.

ಉಡುಪಿ: ಕರಾವಳಿಯಲ್ಲಿ ಮಟ್ಕಾ ದಂಧೆ ಮಿತಿಮೀರಿದೆ. ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರಿದಿದೆ. ಹಿರಿಯಡ್ಕ ಮತ್ತು ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜೂಜಾಟ ನಡೆಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.

ಹಿರಿಯಡ್ಕ: ದಿನಸಿ ಅಂಗಡಿ ಬಳಿ ಮಟ್ಕಾ ದಂಧೆ

ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನಿತ್ ಕುಮಾರ್ ಮತ್ತು ತಂಡದವರು ಮಾರ್ಚ್ 26ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಪೆರ್ಡೂರು ಗ್ರಾಮದ ಕುಕ್ಕೆಹಳ್ಳಿ ರಸ್ತೆಯ ದಿನೇಶ್ ಎಂಬುವವರ ದಿನಸಿ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಜೂಜಾಟ ನಡೆಸುತ್ತಿದ್ದ ದಿನೇಶ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ತಾನು ಸಂಗ್ರಹಿಸಿದ ಹಣವನ್ನು ರಾಘವೇಂದ್ರ ಅಲಿಯಾಸ್ ರಾಘಣ್ಣ ಎಂಬುವವರು ತೆಗೆದುಕೊಂಡು ಹೋಗುತ್ತಾರೆ ಎಂದು ಆರೋಪಿ ತಿಳಿಸಿದ್ದಾನೆ.

Also Read : ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ಅನುದಾನ ಬಿಡುಗಡೆಗೆ ಮಂಜೂರಾತಿ : ವಿ.ಸುನಿಲ್‌ ಕುಮಾರ್‌

ಬಂಧಿತರಿಂದ ₹1,010 ನಗದು, ಮಟ್ಕಾ ನಂಬರ್ ಬರೆದ ನೋಟು ಪುಸ್ತಕ ಮತ್ತು ಬಾಲ್ ಪೆನ್. ವಶಕ್ಕೆ ಪಡೆಯಲಾಗಿದೆ. ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮಲ್ಪೆ: ಸಂಘಟಿತ ಮಟ್ಕಾ ಜಾಲ ಪತ್ತೆ

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಲಭಿಸಿದ ಮಾಹಿತಿಯ ಮೇರೆಗೆ ಮಟ್ಕಾ ಜೂಜಾಟದ ಮೇಲೆ ದಾಳಿ ನಡೆಸಿದ್ದಾರೆ. ಮಟ್ಕಾ ಆಟಕ್ಕಾಗಿ ಹಣ ಸಂಗ್ರಹಿಸುತ್ತಿದ್ದ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Also Read : ಸಾಲಿಗ್ರಾಮ : ಮಲತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ವಿರೋಧ : ಗ್ರಾಮಸ್ಥರ ಜನಾಕ್ರೋಶ

ವಿಚಾರಣೆ ವೇಳೆ ಆರೋಪಿಯು ತಾನು ಸಂಗ್ರಹಿಸಿದ ಹಣವನ್ನು ಉಡುಪಿಯ ಲಿಯೋ ಎಂಬುವವರಿಗೆ ನೀಡುವುದಾಗಿ ಒಪ್ಪಿಕೊಂಡಿದ್ದಾನೆ. ಲಾಭ ಗಳಿಸುವ ಉದ್ದೇಶದಿಂದ ಇಬ್ಬರೂ ಸೇರಿ ಸಂಘಟಿತವಾಗಿ ಈ ಅಕ್ರಮ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಬಂಧಿತರಿಂದ ₹530 ನಗದು ಹಾಗೂ ಮಟ್ಕಾ ಚೀಟಿ ಮತ್ತು ಬಾಲ್ ಪೆನ್ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆಯನ್ನು ಮುಂದುವರಿಸಿದ್ದಾರೆ.

udupi police raid matka gambling hiriadka malpe arrest

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories