ಶ್ರೀಗಂಧಕಾವಲ್​ ವಾಯುಪಡೆ ವಶದಲ್ಲಿರುವ ಜಾಗ ಶೀಘ್ರದಲ್ಲೇ ಮರುವಶ: ಸಚಿವ ಈಶ್ವರ ಖಂಡ್ರೆ

ರಾಜ್ಯ ಸರ್ಕಾರವು 2017ರ ಅಕ್ಟೋಬರ್​ 9ರಂದು ವಾಯುಪಡೆಗೆ ನೀಡಿದ್ದ ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರದ್ದುಗೊಳಿಸಿದೆ.

ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿರುವ 444 ಎಕರೆ ಅಮೂಲ್ಯ ಅರಣ್ಯ ಭೂಮಿಯನ್ನು ಅತಿಕ್ರಮಣದಿಂದ (forest land encroachment) ಮುಕ್ತಗೊಳಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮರುಪಡೆಯಲು ಮುಂದಾಗಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿಯಲ್ಲಿ ಅರಣ್ಯ ವಲಯಕ್ಕೆ ಸೇರಿರುವ ಈ ಜಾಗವನ್ನು ವಶಕ್ಕೆ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರವು 2017ರ ಅಕ್ಟೋಬರ್​ 9ರಂದು ವಾಯುಪಡೆಗೆ ನೀಡಿದ್ದ ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರದ್ದುಗೊಳಿಸಿದೆ. ಈ ವಲಯವನ್ನು ಶ್ವಾಸತಾಣವಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಹಾಗೂ ತೆರವು ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು.

ಆದರೆ ರಾಷ್ಟ್ರೀಯ ಹಿತದ ದೃಷ್ಟಿಯಿಂದ ಭೂಮಂಜೂರಾತಿ ರದ್ದು ಪಡಿಸಿದ ಬಳಿಕವೂ ಭಾರತೀಯ ವಾಯುಪಡೆ ಸದರಿ ಭೂಮಿಯನ್ನು ಬಳಸಲು, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ರಡಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರ್ಯಾಯ ಭೂಮಿ ನೀಡುವಂತೆ ತಿಳಿಸಿದ್ದರೂ ವಾಯುಪಡೆ ನಿಯಮ ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ 64ಎ ನೋಟಿಸ್ ನೀಡಿ ಒತ್ತುವರಿ ತೆರವು ಮಾಡಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ರಾಮನವಮಿ : ಮಾರ್ಚ್ 27ಕ್ಕೆ ಬೆಂಗಳೂರಲ್ಲಿ ಮಾಂಸ ಮಾರಾಟ ಬಂದ್

‘‘ಈ ಜಮೀನಿಗೂ ವಾಯುಪಡೆಗೂ ಇಲ್ಲ ಯಾವುದೇ ಸಂಬಂಧ’’
ಈ ಜಮೀನಿಗೂ ವಾಯುಪಡೆಗೂ ಯಾವುದೇ ಸಂಬಂಧ ಇಲ್ಲದ ಹಿನ್ನೆಲೆಯಲ್ಲಿ ಇನ್ನು ಮುಂದೆ ಈ ಪ್ರದೇಶದಲ್ಲಿ ಯಾವುದೇ ಮೂಲಸೌಕರ್ಯ ಕಾಮಗಾರಿ ನಡೆಸಬೇಕಿದ್ದಲ್ಲಿ ಅರಣ್ಯ ಇಲಾಖೆಯ ‘ಪರಿವೇಶ್’ ಪೋರ್ಟಲ್ ಮೂಲಕವೇ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories