ಇಂಧನ ಬಿಕ್ಕಟ್ಟಿನ ನಡುವೆಯೇ ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್​ನ್ಯೂಸ್​ : ಅಬಕಾರಿ ಸುಂಕದಲ್ಲಿ ಭಾರೀ ಕಡಿತ

Excise Duty: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಸೃಷ್ಠಿಯಾಗಿದ್ದು ಶೀಘ್ರದಲ್ಲಿಯೇ ಭಾರತದಲ್ಲಿ ಪೆಟ್ರೋಲ್​, ಡೀಸೆಲ್​ ದರ ಏರಿಕೆಯಾಗಲಿದೆ ಎಂಬ ಊಹಾಪೋಹಗಳ ನಡುವೆಯೇ ಕೇಂದ್ರ ಸರ್ಕಾರ ದೇಶದ ಜನತೆಗೆ ಗುಡ್​ನ್ಯೂಸ್​ ನೀಡಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ವಾಣಿಜ್ಯ ಸಿಲಿಂಡರ್​ ಪೂರೈಕೆಯಲ್ಲಿ 70 ಪ್ರತಿಶತ ಏರಿಕೆ ಮಾಡಿದ್ದರೆ ಪೆಟ್ರೋಲ್​, ಡೀಸೆಲ್​ ಮೇಲಿನ ತೆರಿಗೆಯನ್ನು ಶೇಕಡಾ 10ರಷ್ಟು ಕಡಿತಗೊಳಿಸಿ ಉದ್ಯಮ ವಲಯಕ್ಕೆ ಬೆಂಬಲ ನೀಡಿದೆ ಎಂದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಸಂಪೂರ್ಣ ಜಗತ್ತಿನಲ್ಲಿ ಇಂಧನ ಪೂರೈಕೆಯಲ್ಲಿ ಸಂಕಷ್ಟ ಎದುರಾಗಿರುವ ಈ ಸಂದರ್ಭದಲ್ಲಿ ಭಾರತದ ಕೈಗಾರಿಕಾ ವಲಯಕ್ಕೆ ಯಾವುದೇ ರೀತಿಯ ತೊಂದರೆ ಬಾರದಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಪೂರಕವಾಗಿ ತೈಲ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದಲ್ಲದೇ, ವಾಣಿಜ್ಯ ಎಲ್ ಪಿಜಿ ಹಂಚಿಕೆಯನ್ನು ಹೆಚ್ಚಿಸಿದೆ.

ದೇಶದಲ್ಲಿ ವಾಣಿಜ್ಯ ಸಿಲಿಂಡರ್​ ಪೂರೈಕೆಯಲ್ಲಿ ಉಂಟಾಗುತ್ತಿರುವ ಅಭಾವ ಗಮನಕ್ಕೆ ಬರುತ್ತಿದ್ದಂತೆಯೇ ಕಾರ್ಯೋನ್ಮುಖರಾದ ಪ್ರಧಾನಿ ಮೋದಿ ಅವರು ದೇಶದಲ್ಲಿ ವಾಣಿಜ್ಯ ಸಿಲಿಂಡರ್​ಗಳ ಪೂರೈಕೆ ಪ್ರಮಾಣವನ್ನು ಶೇಕಡಾ 70ರಷ್ಟು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಿಂದ ದೇಶದ ಆಟೋಮೊಬೈಲ್​, ಉಕ್ಕು ಸೇರಿದಂತೆ ವಿವಿಧ ಉತ್ಪಾದನಾ ವಲಯಗಳಿಗೆ ಹೆಚ್ಚಿನ ಲಾಭವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಜಾರಿಯಾಗುತ್ತಾ ಕೊರೊನಾ ಮಾದರಿ ಲಾಕ್ ಡೌನ್ : ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ

ದೇಶದಲ್ಲಿ ಲಾಕ್​ಡೌನ್​ ಇಲ್ಲ 

ಇನ್ನು ದೇಶದಲ್ಲಿ ಕೊರೊನಾ ಮಾದರಿಯ ಲಾಕ್​ಡೌನ್​ ಜಾರಿಯಾಗಲಿದೆ ಎಂಬ ಗೊಂದಲಕ್ಕೂ ಇದೇ ವೇಳೆ ತೆರೆ ಎಳೆದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ದೇಶದಲ್ಲಿ ಕೊರೊನಾ ಮಾದರಿ ಪರಿಸ್ಥಿತಿ ಏನಿಲ್ಲ. ಹೀಗಾಗಿ ದೇಶದಲ್ಲಿ ಲಾಕ್​ಡೌನ್ ಜಾರಿಮಾಡುವಂತಹ ಪ್ರಸ್ತಾವನೆಯೇ ಸರ್ಕಾರದ ಮುಂದೆ ಬಂದಿಲ್ಲ. ಹೀಗಾಗಿ ಯಾರೊಬ್ಬರೂ ಇಂತಹ ಹುಸಿ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಂದಿಗೂ ಜನಪರ ನಿಲುವು ಕೈಗೊಳ್ಳಲಿದೆ ಎಂದಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories