Heavy rain :ಮುಂದಿನ 48 ಗಂಟೆಗಳಲ್ಲಿ 17 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಬಹುದು.

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮಾರ್ಚ್ 31, 2026 ರವರೆಗೆ ದೇಶದ ಸುಮಾರು 17 ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ದಿಢೀರ್ ಹವಾಮಾನ ಬದಲಾವಣೆಗೆ ‘ಪಾಶ್ಚಾತ್ಯ ವಿಕ್ಷೋಭೆ’ (Western Disturbance) ಪ್ರಮುಖ ಕಾರಣವಾಗಿದೆ.‌

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಬಹುದು.

ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಮತ್ತು ಕೆಲವು ಕಡೆ ಆಲಿಕಲ್ಲು ಮಳೆ (Hailstorm) ಆಗುವ ಎಚ್ಚರಿಕೆ ನೀಡಲಾಗಿದೆ.

Also Read: ಕರ್ನಾಟಕದಲ್ಲಿ ‘ಬಿಸಿ ರಾತ್ರಿ’ಗಳ ಭೀತಿ: 30 ವರ್ಷಗಳಲ್ಲೇ ದಾಖಲೆ ಬರೆದ ತಾಪಮಾನ; ಈ ಜಿಲ್ಲೆಗಳಿಗೆ ಉಷ್ಣಾಘಾತದ ಎಚ್ಚರಿಕೆ!

ಈಶಾನ್ಯ ಭಾರತದ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಎತ್ತರದ ಪ್ರದೇಶಗಳಲ್ಲಿ ಭಾರಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಈ ಮಳೆಯಿಂದಾಗಿ ಉತ್ತರ ಮತ್ತು ಕೇಂದ್ರ ಭಾರತದಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು  ಕುಸಿಯಲಿದ್ದು, ಸದ್ಯಕ್ಕೆ ಬಿಸಿಲಿನ ಬೇಗೆಯಿಂದ ಜನರಿಗೆ ಸ್ವಲ್ಪ ನೆಮ್ಮದಿ ಸಿಗಲಿದೆ. ಆದರೆ, ಏಪ್ರಿಲ್ 1 ರಿಂದ ತಾಪಮಾನ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.

ಮುನ್ನೆಚ್ಚರಿಕಾ ಕ್ರಮಗಳು :

ರೈತರಿಗೆ ಸೂಚನೆ: ಕೊಯ್ಲು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳಿ, ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇರುತ್ತದೆ.

ಗುಡುಗು-ಮಿಂಚು: ಮಳೆ ಬರುವಾಗ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬೇಡಿ.
ಪ್ರಯಾಣ: ಗುಡ್ಡಗಾಡು ಪ್ರದೇಶಗಳಲ್ಲಿ ಪ್ರಯಾಣಿಸುವವರು ಹವಾಮಾನ ಗಮನಿಸಿ ಪ್ರಯಾಣ ಬೆಳೆಸುವುದು ಸೂಕ್ತ.

 

Heavy rain is forecast in 17 states in the next 48 hours

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories