ಕಾರ್ಕಳ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ; ಇಬ್ಬರ ಬಂಧನ

ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆಹಿತ್ಲು ಗೋಕುಲ್‌ ಕಂಪೌಂಡ್ ಬಳಿಯ ಗಣೇಶ ಕಾಂಪ್ಲೇಕ್ಸ ಎದುರುಗಡೆ, ಸಾರ್ವಜನಿಕವಾಗಿ ಮಟ್ಕಾ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಸಾರ್ವಜನಿಕವಾಗಿ ಮಟ್ಕಾ ಜುಗಾರಿ ಆಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬುಧವಾರ (ಏಪ್ರಿಲ್ 1, 2026) ದಾಳಿ ನಡೆಸಿ ಬಂಧಿಸಿದ್ದಾರೆ.

ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆಹಿತ್ಲು ಗೋಕುಲ್‌ ಕಂಪೌಂಡ್ ಬಳಿಯ ಗಣೇಶ ಕಾಂಪ್ಲೇಕ್ಸ ಎದುರುಗಡೆ, ಸಾರ್ವಜನಿಕವಾಗಿ ಮಟ್ಕಾ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. “1 ರೂಪಾಯಿಗೆ 70 ರೂಪಾಯಿ ಲಾಭ ನೀಡುವುದಾಗಿ” ಆಮಿಷ ಒಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Also Read : ಸಾಸ್ತಾನ : ತೇಜಸ್​ ಅಪಹರಣ ಪ್ರಕರಣ : 7 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕರ್ಕಾಳ ಹಿರ್ಗಾನ ನಿವಾಸಿ ಸುಧೀಂದ್ರ ಪೂಜಾರಿ (47 ವರ್ಷ), ಕಾರ್ಕಳ ಕುಕ್ಕುಂದೂರು ನಿವಾಸಿ ಮಹಮ್ಮದ್‌ ರಫೀಕ್‌( 37 ವರ್ಷ) ಎಂಬವರೇ ಬಂದಿತ ಆರೋಪಿಗಳು. ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಎಸ್‌ ಆರ್‌ ಅವರ ನೇತೃತ್ವದಲ್ಲಿ ಸಿಬ್ಬಂದಿಯವರು ಈ ಮಿಂಚಿನ ದಾಳಿ ನಡೆಸಿದ್ದಾರೆ.

Also Read : ಉಡುಪಿ : ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ದಾಳಿಯ ವೇಳೆ ಆರೋಪಿಗಳು ಮಟ್ಕಾ ಜುಗಾರಿ ಆಟಕ್ಕೆ ಬಳಸುತ್ತಿದ್ದ ಒಟ್ಟು 2,180/- ರೂಪಾಯಿ ನಗದು, ಮಟ್ಕಾ ಸಂಖ್ಯೆಗಳನ್ನು ಬರೆದಿದ್ದ ಚೀಟಿಗಳು ಹಾಗೂ ಪೆನ್ನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

karkalla police raid matka gambling hirgana

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories