ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ವೇದಿಕೆ ಮೇಲೆಯೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ

ಬೆಂಗಳೂರಿನ ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಸಂತೋಷ್ ಹೆಗ್ಡೆ ಅವರು ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದರು.

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. ಈ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದ್ದು, ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಸಂತೋಷ್ ಹೆಗ್ಡೆ ಅವರು ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದರು. ಭಾಷಣ ಮುಗಿಸಿ ಕುಳಿತುಕೊಳ್ಳಲು ಮುಂದಾದ ಸಂದರ್ಭದಲ್ಲಿ ಅವರಿಗೆ ತೀವ್ರ ತಲೆಸುತ್ತು ಕಾಣಿಸಿಕೊಂಡು ಸಮತೋಲನ ತಪ್ಪಿ ವೇದಿಕೆಯ ಮೇಲೆಯೇ ಕುಸಿದು ಬಿದ್ದರು.

Also Read : ಗೃಹಲಕ್ಷ್ಮಿ 29ನೇ ಕಂತಿನ ಹಣ ಬಿಡುಗಡೆ: ನಿಮ್ಮ ಖಾತೆಗೆ ₹2,000 ಜಮೆಯಾಗಿಲ್ಲವೇ ? ಈ ತಪ್ಪು ಸರಿಪಡಿಸಿಕೊಳ್ಳಿ

ಆ ಸಮಯದಲ್ಲಿ ವೇದಿಕೆಯಲ್ಲಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮತ್ತು ಕಾರ್ಯಕ್ರಮದ ಆಯೋಜಕರು ತಕ್ಷಣವೇ ಅವರ ನೆರವಿಗೆ ಧಾವಿಸಿದರು. ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸ್ವತಃ ಸ್ಪೀಕರ್ ಯು.ಟಿ. ಖಾದರ್ ಅವರೇ ನ್ಯಾಯಮೂರ್ತಿಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದರು.

ಚಿಕಿತ್ಸೆಯ ನಂತರ ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರು ಪ್ರಜ್ಞಾವಸ್ಥೆಯಲ್ಲಿದ್ದು, ವೈದ್ಯರೊಂದಿಗೆ ಮಾತನಾಡುತ್ತಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದು, ಹಿತೈಷಿಗಳು ಮತ್ತು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Also Read : ರಾಜ್ಯದಲ್ಲಿ ಮಿತಿಮೀರಿದ ಬಿರುಬೇಸಿಗೆಯ ಬವಣೆ: ಸರ್ಕಾರಿ ನೌಕರರ ಕಚೇರಿ ಸಮಯ ಬದಲಾವಣೆ

80 ವರ್ಷ ದಾಟಿದ್ದರೂ ಸಹ ಸಂತೋಷ್ ಹೆಗ್ಡೆ ಅವರು ಇಂದಿಗೂ ಸಾಮಾಜಿಕ ಕಾರ್ಯಗಳಲ್ಲಿ ಅತ್ಯಂತ ಸಕ್ರಿಯರಾಗಿದ್ದಾರೆ. ಭ್ರಷ್ಟಾಚಾರದ ವಿರುದ್ಧದ ಹೋರಾಟ ಮತ್ತು ನೈತಿಕತೆಯ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ ನೀಡುತ್ತಾ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.

 

santhosh hegge health update former lokayukta admitted to hospital Bengaluru news

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories