ಎಸ್​ಎಸ್​ಎಲ್‌ಸಿ ಮೌಲ್ಯಮಾಪಕರಿಗೆ ಗುಡ್​ನ್ಯೂಸ್​..! ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಈಗಾಗಲೇ ಎಸ್​.ಎಸ್​.ಎಲ್​.ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಶಿಕ್ಷಕರು ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಸಜ್ಜಾಗುತ್ತಿದ್ದಾರೆ. ಏಪ್ರಿಲ್​ 8ರಂದು ರಾಜ್ಯಾದ್ಯಂತ ಎಸ್​.ಎಸ್​.ಎಲ್​.ಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಎಲ್ಲದರ ನಡುವೆಯೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪಕರಿಗೆ (SSLC evaluators) ಸಿಹಿಸುದ್ದಿ ನೀಡಿದೆ.

ಹೌದು..! ಈ ಬಾರಿ ಎಸ್​.ಎಸ್​.ಎಲ್​ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪಕರಿಗೆ ಸಿಗುವ ಗೌರವ ಧನದಲ್ಲಿ 5 ಪರ್ಸೆಂಟ್​ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಎಚ್​.ಎನ್​ ಅಧಿಕೃತ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳೇ ಗಮನಿಸಿ…! ಎಸ್​.ಎಸ್​.ಎಲ್​.ಸಿ ಹಾಗೂ ಪಿ.ಯು.ಸಿ ಫಲಿತಾಂಶ ಸಂಭಾವ್ಯ ದಿನಾಂಕ ಪ್ರಕಟ

ರಾಜ್ಯದಲ್ಲಿರುವ 35 ಶೈಕ್ಷಣಿಕ ಜಿಲ್ಲೆಗಳ ಒಟ್ಟು 262 ಕೇಂದ್ರಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ಏಪ್ರಿಲ್​ 8ರಿಂದ ಆರಂಭಗೊಳ್ಳಲಿದೆ.ಉಪ ಮುಖ್ಯ ಮೌಲ್ಯಮಾಪಕರಿಗೆ ಏಪ್ರಿಲ್ 7ರಂದು ಹಾಜರಾಗುವಂತೆ ತಿಳಿಸಲಾಗಿದೆ.. ಸಹಾಯಕ ಮೌಲ್ಯಮಾಪಕರು ಏಪ್ರಿಲ್ 8ರಂದು ಕೇಂದ್ರಗಳಿಗೆ ಹಾಜರಾಗಬೇಕಿದೆ. ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕೃತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಆರಂಭವಾಗಲಿದೆ. ಮೌಲ್ಯ ಮಾಪನ ಕಾರ್ಯ ಪೂರ್ಣಗೊಳಿಸಲು ಏಪ್ರಿಲ್​ 8ರವರೆಗೆ ಗಡುವು ನೀಡಲಾಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories