ಸರ್ಕಾರಿ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಗುಡ್ನ್ಯೂಸ್..! ದ್ವಿತೀಯ ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಭಾಗ್ಯ
ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಚಿಂತಿಸುತ್ತಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲಿಯೇ 12ನೇ ತರಗತಿವರೆಗಿನ ಗಂಡು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಬಸ್ ಪ್ರಯಾಣದ ಭಾಗ್ಯ ನೀಡಲಿದೆ.
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಕಲ್ಪಿಸಿರುವುದು ಗೊತ್ತಿರುವ ವಿಚಾರ. ಆದರೆ ಇದೀಗ ಉಚಿತ ಭಾಗ್ಯದಲ್ಲಿ ಇನ್ನೂ ಒಂದು ಹೆಜ್ಹೆ ಮುಂದಡಿ ಇಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ವರ್ಗಕ್ಕೆ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ (Bus Pass For Students) ವ್ಯಾಸಂಗ ಮಾಡುತ್ತಿರುವ ಗಂಡು ಮಕ್ಕಳನ್ನೂ ಸೇರಿಸಿಕೊಳ್ಳಲು ನಿರ್ಧರಿಸಿದೆ. ಹೌದು..! ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಚಿಂತಿಸುತ್ತಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲಿಯೇ 12ನೇ ತರಗತಿವರೆಗಿನ ಗಂಡು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಬಸ್ ಪ್ರಯಾಣದ ಭಾಗ್ಯ ನೀಡಲಿದೆ.
ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಬೇಕು. ಹಾಗೂ ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಾಗೂ ಸುಲಭವಾಗಿ ತಮ್ಮ ಶಿಕ್ಷಣ ಕೇಂದ್ರಗಳಿಗೆ ತೆರಳಲು ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಒಂದು ವೇಳೆ ಈ ಯೋಜನೆ ಜಾರಿಗೆ ಬಂದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಿಜಕ್ಕೂ ಅನುಕೂಲವಾಗಲಿದೆ.
ರಾಜ್ಯ ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಚರ್ಚಿಸಿ ಈ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈಗಾಗಲೇ ವಿದ್ಯಾರ್ಥಿನಿಯರು ಶಕ್ತಿ ಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತ ಸಾರಿಗೆ ಪ್ರಯಾಣದ ಲಾಭವನ್ನು ಪಡೆಯುತ್ತಿದ್ದಾರೆ. ಈ ಸಾಲಿಗೆ ವಿದ್ಯಾರ್ಥಿಗಳನ್ನೂ ಸೇರ್ಪಡೆ ಮಾಡಿದರೆ ಶಿಕ್ಷಣ ಕಲಿಕೆಗೆ ದೂರದ ಊರಿಗೆ ಪ್ರಯಾಣ ಬೆಳೆಸುವ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಮೌಲ್ಯಮಾಪಕರಿಗೆ ಗುಡ್ನ್ಯೂಸ್..! ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ
ಸದ್ಯ ಈ ಪ್ರಸ್ತಾವನೆಯು ಚರ್ಚಾ ಹಂತದಲ್ಲಿದೆ. ಹಣಕಾಸು ಇಲಾಖೆಯ ಅನುಮೋದನೆ ದೊರೆತ ಬಳಿಕ ಈ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. ಒಂದು ವೇಳೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಬಂದಲ್ಲಿ, ಸಾರಿಗೆ ಇಲಾಖೆಗೆ ಕೊಂಚ ಹೊರೆಯಾದರೂ ಸಹ ಶಿಕ್ಷಣ ಇಲಾಖೆಗೆ ಲಾಭವಾಗಲಿದೆ. ರಾಜ್ಯ ಸರ್ಕಾರ ಈ ಯೋಜನೆಯನ್ನು ಪುರಸ್ಕರಿಸುತ್ತೋ ಅಥವಾ ತಿರಸ್ಕರಿಸುತ್ತೋ ಅನ್ನೋದನ್ನ ಕಾದು ನೋಡಬೇಕಿದೆ.



