ಇಂದಿನಿಂದ ರಾಜ್ಯದಲ್ಲಿ ಮತ್ತೆ ಶುರು ವರುಣನ ಅಬ್ಬರ..! 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

Karnataka Weather Forecast: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್​ 9ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಾಳಿ ಸಹಿತ ಗುಡುಗು ಮಳೆಯಾಗಲಿದ್ದು, 16 ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದಿನಿಂದ ಶುರುವಾಗುವ ಮಳೆಯ ಜೊತೆಗೆ ಗಂಟೆಗೆ 50 ಕಿಲೋಮೀಟರ್​ ವೇಗದಲ್ಲಿ ಬಲವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಮಳೆಯ ಜೊತೆಯಲ್ಲಿ ಗುಡುಗು ಮತ್ತು ಮಿಂಚಿನ ಆರ್ಭಟ ಕೂಡ ಇರಲಿದೆ ಎನ್ನಲಾಗಿದೆ. ಕರಾವಳಿ ಭಾಗದಲ್ಲಿ ಈ ಬಾರಿ ಸಾಧಾರಣ ಮಳೆಯಾಗಲಿದ್ದು ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ‘ಕುಬ್ಜತೆ’ ಆತಂಕ..! 4.25 ಲಕ್ಷ ಕುಬ್ಜ ಕಂದಮ್ಮಗಳ ಪತ್ತೆ: ಉತ್ತರ ಕರ್ನಾಟಕ ಭಾಗದಲ್ಲೇ ಸಮಸ್ಯೆ ಗಂಭೀರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಗಾಳಿಯ ತೀವ್ರತೆ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಮಳೆ ಬಂದ ಸಂದರ್ಭದಲ್ಲಿ ಆಶ್ರಯಕ್ಕಾಗಿ ಮರದ ಕೆಳಗೆ, ಹಳೆಯ ಕಟ್ಟಡಗಳು ಹಾಗೂ ವಿದ್ಯುತ್​ ಕಂಬಗಳ ಸಮೀಪ ನಿಲ್ಲದಂತೆ ಹವಾಮಾನ ಇಲಾಖೆ ಜನಸಾಮಾನ್ಯರಿಗೆ ಎಚ್ಚರಿಕೆ ನೀಡಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories