ನವದೆಹಲಿ : ಕೊರೊನಾ ವೈರಸ್ ಸೋಂಕು ದಿನ ಕಳೆದಂತೆ ಹೆಚ್ಚುತ್ತಲೇ ಇದೀಗ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,706 ಹೊಸ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆಯಾಗಿದೆ.

ಒಂದೆಡೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ರೆ, ಇನ್ನೊಂದೆಡೆ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 1,115 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 73,890 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ. ತಲುಪಿದೆ.

ದೇಶದಲ್ಲಿ ಇದುವರೆಗೆ 43,70,129 ಮಂದಿ ಸೋಂಕು ಕಾಣಿಸಿಕೊಂಡಿದ್ದು, 33,98,845 ಮಂದಿ ಈಗಾಗಲೇ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಳಿದಂತೆ 8,97,394 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 5 ಕೋಟಿಯ 18 ಲಕ್ಷದ 04 ಸಾವಿರದ 677 ಮಂದಿಯ ಕೊರೋನಾ ಪರೀಕ್ಷೆ ಮಾಡಲಾಗಿದ್ದು ಇವರಲ್ಲಿ 11 ಲಕ್ಷದ 54 ಸಾವಿರದ 549 ಕೊರೋನಾ ಪರೀಕ್ಷೆಯ ಮಾದರಿಗಳನ್ನು ನಿನ್ನೆ ಒಂದೇ ದಿನ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.
