ಮಂಡ್ಯ : ದೇವಸ್ಥಾನದಲ್ಲಿ ಮಲಗಿದ್ದ ಮೂವರು ಅರ್ಚಕರ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಕೊಲೆಯಾದ ಮೂವರನ್ನು ಗಣೇಶ, ಪ್ರಕಾಶ ಮತ್ತು ಆನಂದ ಎಂದು ಗುರುತಿಸಲಾಗಿದೆ. ಈ ಮೂವರು ದೇವಸ್ಥಾನದಲ್ಲಿ ಅರ್ಚಕರಾಗಿ ಹಾಗೂ ಸೆಕ್ಯೂರಿಟಿ ಗಾರ್ಡ್ ಆಗಿಯೂ ಕೆಲಸ ಮಾಡುತ್ತಿದ್ದರು.

ನಿನ್ನ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ್ದ ದುಷ್ಕರ್ಮಿಗಳು ಮೂವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ನಂತರ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಪಡೆದು ಕಾಣಿಕೆ ಹುಂಡಿಯನ್ನು ದೇವಸ್ಥಾನದ ಪಕ್ಕದಲ್ಲಿಯೇ ಎಸೆದು ಹೋಗಿದ್ದಾರೆ.

ಮೇಲ್ನೋಟಕ್ಕೆ ಹುಂಡಿ ಹಣಕ್ಕಾಗಿಯೇ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರ ಹತ್ಯೆಗೆ ಸಂಬಂಧಿಸಿದಂತೆ ಬೇರೆ ಕಾರಣಕ್ಕೆ ಈ ಕೊಲೆ ನಡೆದಿದ್ಯಾ ? ಇತರ ಕಾರಣವನ್ನು ಮುಚ್ಚಿ ಹಾಕಲು ಕಳ್ಳತನದ ನಾಟಕ ಮಾಡಿದ್ದಾರಾ ಅನ್ನೋ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
