ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇಂಜಿನಿಯರಿಂಗ್ ಪದವೀಧರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಹೆಸರು ಮತ್ತು ಸಂಖ್ಯೆ:
ಪ್ರಾಜೆಕ್ಟ್ ಇಂಜಿನಿಯರ್-I : 37 ಹುದ್ದೆಗಳು
ಟ್ರೇನಿ ಇಂಜಿನಿಯರ್ : 54 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್: 55 ಹುದ್ದೆಗಳು
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ / ಬಿ.ಟೆಕ್, ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷ ಮೀರಿರಬಾರದು. ಹಾಗೆಯೇ ಮೀಸಲಾತಿ ವಿಭಾಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ :
ಟ್ರೈನಿ ಇಂಜಿಯರ್ಗಳಿಗೆ 25,000 ದಿಂದ 31,000 ರವರೆಗೆ ವೇತನ ನೀಡಲಾಗುತ್ತದೆ. ಪ್ರಾಜೆಕ್ಟ್ ಇಂಜಿಯರ್ಗಳಿಗೆ 35 ಸಾವಿರದಿಂದ 50 ಸಾವಿರದವರೆಗೆ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ಅಪ್ಲಿಕೇಶನ್ಗೆ – 500 ರೂ. ಹಾಗೂ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ – 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಕೊನೆಯ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 27-09-2020