ನಾಳೆ ದ್ವಿತೀಯ ಪಿಯುಸಿ ರಿಸಲ್ಟ್​…! ದ್ವಿತೀಯ ಪಿಯುಸಿ ಫಲಿತಾಂಶ ಡಿಜಿಲಾಕರ್​ನಲ್ಲೂ ಲಭ್ಯ

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕೆ (PUC Result 2026) ಕಾಯುತ್ತಿರುವ ವಿದ್ಯಾರ್ಥಿಗಳಿಗೆ , ಅಧಿಕೃತ ಫಲಿತಾಂಶ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ನಾಳೆಯೇ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದ್ದು ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಇನ್ನು ಫಲಿತಾಂಶ ವೀಕ್ಷಣೆಗೆ ಸಾವಿರಾರು ವಿದ್ಯಾರ್ಥಿಗಳು ಒಮ್ಮೆಯೇ ಅಧಿಕೃತ ವೆಬ್​ಸೈಟ್​ಗೆ ಲಾಗಿನ್​ ಆಗುವುದರಿಂದ ಸರ್ವರ್​ ಸಮಸ್ಯೆ ಉಂಟಾಗಿ ಫಲಿತಾಂಶ ವೀಕ್ಷಣೆ ಸಾಧ್ಯವಾಗುವುದಿಲ್ಲ. ಆದರೆ ಈ ಬಾರಿ ಇಂತಹ ಸಮಸ್ಯೆ ಬಾರದಂತೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಹೊಸ ಕ್ರಮ ಕೈಗೊಂಡಿದೆ. ಈ ಬಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೆಬ್​ಸೈಟ್​ನಲ್ಲಿ ಮಾತ್ರವಲ್ಲದೆ ಡಿಜಿಲಾಕರ್​ ಅಪ್ಲಿಕೇಶನ್​ ಮೂಲಕವೂ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: ಡಿಗ್ರಿ ಮುಗಿದಿದೆಯೇ ? ಮನೆಯಲ್ಲೇ ಕುಳಿತು ಲಕ್ಷ ಗಳಿಸಬಹುದಾದ 5 ಬೆಸ್ಟ್ ‘ಫ್ರೀ’ ಕೋರ್ಸ್‌

ಡಿಜಿಲಾಕರ್‌ನಲ್ಲಿ ಲಭ್ಯವಾಗುವ ಈ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ. ಮುಂದಿನ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ಅಥವಾ ಇತರೆ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದಾಗಿದೆ. ಕಾಲೇಜಿನಿಂದ ಮೂಲ ಅಂಕಪಟ್ಟಿ ಬರುವವರೆಗೂ ಕಾಯಬೇಕು ಎಂದಿಲ್ಲ. ಇದೇ ಡಿಜಿಟಲ್​ ಅಂಕಪಟ್ಟಿಯನ್ನು ವಿದ್ಯಾರ್ಥಿಗಳು ತಮ್ಮ ಮುಂದಿನ ವ್ಯಾಸಂಗಕ್ಕೆ ಬಳಸಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಅಂದಹಾಗೆ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಭವಿಷ್ಯ ನಾಳೆ ನಿರ್ಧಾರಗೊಳ್ಳಲಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories