ನವದೆಹಲಿ : ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಭೀಷ್ಮ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ನಿರ್ದೋಷಿ ಎಂದಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ ಎಂದು ಸಿಬಿಐ ನ್ಯಾಯಾಲಯ ಆಭಿಪ್ರಾಯಪಟ್ಟಿದೆ.
ಸಿಬಿಐ ವಿಶೇಷ ನ್ಯಾಯಾಲಯ ಸುಮಾರು 28 ವರ್ಷಗಳಷ್ಟು ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸುವ ಮೂಲಕ ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಲ್. ಕೆ.ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ.

ನ್ಯಾಯಾಲಯ ನ್ಯಾಯಾಧೀಶರಾದ ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು ಆರೋಪಿಗಳು ತೀರ್ಪು ನೀಡುವ ಸಂದರ್ಭದಲ್ಲಿ ಖುದ್ದು ಹಾಜರಿರಬೇಕೆಂದು ಆದೇಶಿಸಿದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಾಲು ಸಿಂಗ್, ಬಿಬಿ ಶರಣ್ ಸಿಂಗ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಉಳಿದ ಆರೋಪಿಗಳು ಕೋರ್ಟ್ ಕೊಠಡಿಗೆ ಹಾಜರಾಗಿದ್ದರು.