ಇಂಡಿಯನ್ ಬ್ಯಾಂಕ್ ನಲ್ಲಿ 350 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏಪ್ರಿಲ್ 28ರ ಮೊದಲು ಅರ್ಜಿ ಹಾಕಿ
Indian Bank SO Vacancy 2026: ಇಂಡಿಯನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಬೇಕೆಂದು ತಯಾರಿ ನಡೆಸುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಇಂಡಿಯನ್ ಬ್ಯಾಂಕ್ ಒಟ್ಟು 350 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 28 ಆಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ವಯೋಮಿತಿ
ಇಂಡಿಯನ್ ಬ್ಯಾಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 26 ವರ್ಷಗಳಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ 33 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ವಿದ್ಯಾರ್ಹತೆ
ಸ್ಪೆಷಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು.
ವೇತನ
ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. ಗಳಿಂದ 85,920 ರೂ. ವರೆಗೆ ವೇತನ ನೀಡಲಾಗುತ್ತದೆ. ಸ್ಕೇಲ್ II ಹುದ್ದೆಗೆ 64,820 ರೂ. ದಿಂದ 93,960 ರೂ. ವರೆಗೆ ಹಾಗೂ ಸ್ಕೇಲ್-III ಹುದ್ದೆಗೆ 85,920 ರೂ. ರಿಂದ 1,05,280 ರೂ. ರವರೆಗೆ ಸಂಬಳ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ. ಮೊದಲು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ, ನಂತರ ಪರೀಕ್ಷೆ ಮತ್ತು ಸಂದರ್ಶನ ಇರುತ್ತದೆ.
ಇದನ್ನೂ ಓದಿ: ನಾರ್ದರ್ನ್ ಕೋಲ್‌ಫೀಲ್ಡ್‌ನಲ್ಲಿ ಉದ್ಯೋಗಾವಕಾಶ: ಡಿಪ್ಲೊಮಾ, ಪದವೀಧರರು ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. SC/ST/PwBD ಅಭ್ಯರ್ಥಿಗಳಿಗೆ 175 ರೂ. ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಹೇಗೆ?
ಇಂಡಿಯನ್ ಬ್ಯಾಂಕ್ ಸ್ಪೆಷಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.



