ಭಾರತ್ ಪೆಟ್ರೋಲಿಯಂನಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ: ವರ್ಷಕ್ಕೆ 17.11 ಲಕ್ಷ ವೇತನ ಗಳಿಸುವ ಅವಕಾಶ
ಬಿಪಿಸಿಎಲ್ ಜೂನಿಯರ್ ಎಕ್ಸಿಕ್ಯೂಟಿವ್, ಸೆಕ್ರೆಟರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು? ಇಲ್ಲಿದೆ ಓದಿ.
ಭಾರತ್ ಪೆಟ್ರೋಲಿಯಂ ನಿಗಮ ಲಿಮಿಟೆಡ್ (BPCL) ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಡಿಪ್ಲೊಮಾ, ಪದವಿ ಮುಗಿಸಿ ಕೆಲಸದ ಹುಡುಕಾಟದಲ್ಲಿರುವವರಿಗೆ ಈ ನೇಮಕಾತಿ ಪ್ರಕ್ರಿಯೆಯು ಸುವರ್ಣಾವಕಾಶವನ್ನು ಒದಗಿಸಿದೆ. ಈ ನೇಮಕಾತಿ ಮೂಲಕ ಬಿಪಿಸಿಎಲ್ ಒಟ್ಟು 250 ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದರಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್, ಅಸೋಸಿಯೇಟ್ ಎಕ್ಸಿಕ್ಯೂಟಿವ್, ಸೆಕ್ರೆಟರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಬಿಪಿಸಿಎಲ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 17 ಆಗಿದೆ. ಬಿಪಿಸಿಎಲ್ನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ಹುದ್ದೆಯ ವಿವರ
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಜೂನಿಯರ್ ಎಕ್ಸಿಕ್ಯುಟಿವ್, ಸೆಕ್ರೆಟರಿ ಮತ್ತು ಅಸೋಸಿಯೇಟ್ ಎಕ್ಸಿಕ್ಯುಟಿವ್ ಸೇರಿದಂತೆ 250 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ.
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆ: ಡಿಪ್ಲೊಮಾ (ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಸಿವಿಲ್, ಇತ್ಯಾದಿ)
ಜೂನಿಯರ್ ಎಕ್ಸಿಕ್ಯೂಟಿವ್ (ಲೆಕ್ಕಪತ್ರ ನಿರ್ವಹಣೆ) : ಪದವಿ, ಸಿಎ
ಸೆಕ್ರೆಟರಿ : ಪದವಿ
ಅಸೋಸಿಯೇಟ್ ಎಕ್ಸಿಕ್ಯೂಟಿವ್ : ಎಮ್ಎಸ್ಸಿ (ಕೆಮೆಸ್ಟ್ರಿ)
ಅಸೋಸಿಯೇಟ್ ಎಕ್ಸಿಕ್ಯೂಟಿವ್ ( ಅಧಿಕೃತ ಭಾಷೆ) : ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ
ಇದನ್ನೂ ಓದಿ: Agriculture Jobs 2026: ಕೃಷಿ ಇಲಾಖೆಯಿಂದ ಅತಿ ದೊಡ್ಡ ನೇಮಕಾತಿ: ಮೇ10 ರ ಮೊದಲು ಅರ್ಜಿ ಹಾಕಿ
ವಯೋಮಿತಿ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು 30 ರಿಂದ 35 ವರ್ಷಗಳ ನಡುವೆ ಇರಬೇಕು.
ವೇತನ ಶ್ರೇಣಿ
ಈ ನೇಮಕಾತಿಯಲ್ಲಿ ಹುದ್ದೆಗೆ ಅನುಗುಣವಾಗಿ ತಿಂಗಳಿಗೆ 30,000 ರೂ ಗಳಿಂದ 1,40,000 ರೂ. ವರೆಗೆ ವೇತನ ನೀಡಲಾಗುವುದು.
ಅರ್ಜಿ ಶುಲ್ಕ
ಬಿಪಿಸಿಎಲ್ನ ಈ ನೇಮಕಾತಿಯಲ್ಲಿ ಸಾಮಾನ್ಯ/ಒಬಿಸಿ/ಇಡಬ್ಲ್ಯೂ ಎಸ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 1,180 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC, ST ಮತ್ತು PwBD ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಬಿಪಿಸಿಎಲ್ ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ಬಿಪಿಸಿಎಲ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ
ಬಿಪಿಸಿಎಲ್ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.



