ಕರ್ನಾಟಕ SSLC ಫಲಿತಾಂಶ 2026: ನಾಳೆ ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಪ್ರಕಟ
ಹಲವು ದಿನಗಳ ಗೊಂದಲದ ನಂತರ, ನಾಳೆ ಅಂದರೆ ಏಪ್ರಿಲ್ 23, ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ.
ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಹಲವು ದಿನಗಳ ಗೊಂದಲದ ನಂತರ, ನಾಳೆ ಅಂದರೆ ಏಪ್ರಿಲ್ 23, ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜಾರಾಗಿದ್ದರು.
ಮುಖ್ಯ ಮಾಹಿತಿ:
* ಫಲಿತಾಂಶದ ದಿನಾಂಕ: ಏಪ್ರಿಲ್ 23, 2026
* ಸಮಯ: ಮಧ್ಯಾಹ್ನ 12:00 ಗಂಟೆಗೆ
ಹಿಂದಿ ಪರೀಕ್ಷೆ ಗೊಂದಲಕ್ಕೆ ತೆರೆ:
ಕಳೆದ ಕೆಲವು ದಿನಗಳಿಂದ ಹಿಂದಿ ವಿಷಯದ ಮೌಲ್ಯಮಾಪನ ಮತ್ತು ಅಂಕಗಳ ಹಂಚಿಕೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ವಿಚಾರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚಿಸಿದ ಸಚಿವರು, ಅಂತಿಮವಾಗಿ ಕೋರ್ಟ್ ಆದೇಶವನ್ನು ಪಾಲಿಸಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಫಲಿತಾಂಶದ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.
ಇದನ್ನೂ ಓದಿ: ‘ಹಿಂದಿ ಪರೀಕ್ಷೆಗೆ ಅಂಕವೇ ಪರಿಗಣಿಸಿ’ : ಹೈಕೋರ್ಟ್ ಖಡಕ್ ಸೂಚನೆ
ಫಲಿತಾಂಶ ನೋಡುವುದು ಹೇಗೆ?
ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು:
1. karresults.nic.in
2. kseab.karnataka.gov.in
ವೆಬ್‌ಸೈಟ್‌ನಲ್ಲಿ ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್‌ಸೈಟ್‌ನಲ್ಲಿ ಲಿಂಕ್ ಲಭ್ಯವಿರಲಿದೆ.



