Karnataka SSLC Result 2026: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 91.6% ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದೆ.

Karnataka SSLC Result 2026: ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 91.6% ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದೆ. ವಿಶೇಷವೆಂದರೆ, ಮೊದಲ ಮೂರೂ ಸ್ಥಾನಗಳು ಕರಾವಳಿ ಕರ್ನಾಟಕದ ಜಿಲ್ಲೆಗಳ ಪಾಲಾಗಿವೆ.
ಕರ್ನಾಟಕದ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಪ್ರಥಮ ರಾಂಕ್ ಪಡೆದಿದ್ದಾರೆ. ರೂಪಾ, ಜಾಹ್ನವಿ, ಉತ್ಸವ ಪಾಟೀಲ್, ಭರತ್, ಸೌಜನ್ಯ, ಸುಖದೇವ್, ವೃಂದಾ ದಾಖಲೆ ನಿರ್ಮಿಸಿದ್ದಾರೆ.
Also Read : SSLC Result 2026 : ಮುದ್ದೂರು ವಿಎಸ್ಎಸ್ನ ಕಲ್ಯಾಣಿಗೆ ರಾಜ್ಯದಲ್ಲಿ 5ನೇ ರಾಂಕ್, ಸತತ 100 % ರಿಸಲ್ಟ್
ಎಸ್ಎಸ್ಎಲ್ಸಿ ಫಲಿತಾಂಶ : ಕರಾವಳಿ ಮೇಲುಗೈ
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಈ ಬಾರಿ ದಕ್ಷಿಣ ಕನ್ನಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ಕರಾವಳಿ ಭಾಗದ ಈ ಮೂರು ಜಿಲ್ಲೆಗಳು ಸತತವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿವೆ.
Also Read : SSLC 2026 ಪ್ರಕಟ: ಎಸ್ಎಸ್ಎಲ್ಸಿ ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಪರೀಕ್ಷೆಯಲ್ಲಿ ಈ ಬಾರಿ ಒಟ್ಟು 7,24,794 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದು, ಶೈಕ್ಷಣಿಕ ವಲಯದಲ್ಲಿ ಸಂಭ್ರಮ ಮನೆಮಾಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರು ಬಾಲಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳು ಈ ಬಾರಿ ನಗರ ಭಾಗದ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡಿವೆ.
ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?
ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗಳ ಮೂಲಕ ತಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು:karresults.nic.inkseab.karnataka.gov.inSMS ಮೂಲಕ ಪಡೆಯಲು: KAR10 <Reg Number> ಟೈಪ್ ಮಾಡಿ 56263 ಕ್ಕೆ ಸಂದೇಶ ಕಳುಹಿಸಿ.
ಅನುತ್ತೀರ್ಣರಾದವರು ಮುಂದೇನು ಮಾಡಬೇಕು ?
ಫಲಿತಾಂಶದಿಂದ ಅತೃಪ್ತರಾದ ವಿದ್ಯಾರ್ಥಿಗಳಿಗೆ ಮರು ಮೌಲ್ಯಮಾಪನ (Revaluation) ಮತ್ತು ಅಂಕಗಳ ಎಣಿಕೆಗೆ ಅರ್ಜಿ ಸಲ್ಲಿಸಲು ಮಂಡಳಿ ಅವಕಾಶ ನೀಡಿದೆ. ಹಾಗೆಯೇ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂನ್ ತಿಂಗಳಿನಲ್ಲಿ ಪೂರಕ ಪರೀಕ್ಷೆ (Exam-2) ನಡೆಸಲು ಮಂಡಳಿ ಸಿದ್ಧತೆ ನಡೆಸಿದೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಕಡಿಮೆ ಅಂಕ ಬಂದವರು ಅಥವಾ ಅನುತ್ತೀರ್ಣರಾದವರು ಧೃತಿಗೆಡದೆ ಮುಂದಿನ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಿ.
sslc result 2026 karnataka-toppers-list dakshina kannada first



