ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ತೀವ್ರ ಗಂಭೀರ : ಶ್ವಾಸಕೋಶ ಕಸಿಗೆ ಸಜ್ಜಾದ ವೈದ್ಯರ ತಂಡ

ಸಚಿವ ಡಿ. ಸುಧಾಕರ್​ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎನ್ನಲಾಗಿದ್ದು, ಖ್ಯಾತ ಶ್ವಾಸಕೋಶ ತಜ್ಞ ಡಾ. ವೆಂಕಟಗಿರಿ ನೇತೃತ್ವದ ತಂಡವು ಶ್ವಾಸಕೋಶ ಕಸಿಗೆ ನಿರ್ಧರಿಸಿದೆ.

ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್​ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ . ಸಚಿವರಿಗೆ ಶ್ವಾಸಕೋಶದ ಸೋಂಕು ತೀವ್ರವಾದ ಕಾರಣ ಬೆಂಗಳೂರಿನ ಕಿಮ್ಸ್​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶದ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಶ್ವಾಸಕೋಶದ ಕಸಿ ನಡೆಸಲು ವೈದ್ಯರು ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿಯಲ್ಲಿ ತೊಡಗಿದ್ದಾರೆ.

ಅಂದಹಾಗೆ ಸಚಿವ ಡಿ. ಸುಧಾಕರ್​ ಒಂದು ತಿಂಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆಂದು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯೇನೋ ಯಶಸ್ವಿಯಾಗಿತ್ತು, ಆದರೆ ಶ್ವಾಸಕೋಶದಲ್ಲಿ ತೀವ್ರವಾದ ಸೋಂಕು ಕಾಣಿಸಿಕೊಳ್ಳಲಾರಂಭಿಸಿತು. ಕಳೆದ ಒಂದು ತಿಂಗಳಿನಿಂದ ಸಚಿವ ಡಿ. ಸುಧಾಕರ್​ ಸಾವು – ಬದುಕಿನ ನಡುವೆ ಹೋರಾಡುತ್ತಲೇ ಇದ್ದಾರೆ . ಎರಡು ದಿನಗಳ ಹಿಂದೆಯಷ್ಟೇ ಇವರನ್ನು ಕಿಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಜೀವನಾಂಶ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು : ವಿವಾಹ ನಂತರ ಜನಿಸಿದ ಕಂದಮ್ಮನಿಗೂ ನಿಯಮ ಅನ್ವಯ

ಇನ್ನು ನಿನ್ನೆ ರಾತ್ರಿ 9:30ರ ಸುಮಾರಿಗೆ ಡಿ. ಸುಧಾಕರ್​ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎನ್ನಲಾಗಿದ್ದು, ಖ್ಯಾತ ಶ್ವಾಸಕೋಶ ತಜ್ಞ ಡಾ. ವೆಂಕಟಗಿರಿ ನೇತೃತ್ವದ ತಂಡವು ಶ್ವಾಸಕೋಶ ಕಸಿಗೆ ನಿರ್ಧರಿಸಿದೆ . ಇನ್ನು ಡಿ. ಸುಧಾಕರ್​ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿ , ವೈದ್ಯರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ. ಸಚಿವರ ಶ್ವಾಸಕೋಶದ ಕಸಿಗೆ ಬೇಕಾದ ಎಲ್ಲಾ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಗೆ ಸೂಚನೆ ನೀಡಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories