ರಾಜ್ಯದಲ್ಲಿ ಮುಂದಿನ 7 ದಿನದ ಗುಡುಗು ಸಹಿತ ಭಾರಿ ಮಳೆ : ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಮಳೆ ಇರಲಿದೆ ಎನ್ನಲಾಗಿದೆ. ಇದರ ಜೊತೆಯಲ್ಲಿ ಗಾಳಿಯ ವೇಗ ಕೂಡ ಅತ್ಯಂತ ತೀವ್ರವಾಗಿ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸೂರ್ಯನ ಶಾಖದಿಂದ ಕಂಗೆಟ್ಟಿರುವ ಜನಕ್ಕೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಕಳೆದೊಂದು ತಿಂಗಳಿನಿಂದ ಬಿಸಿಲಿನ ಧಗೆಗೆ ಹೈರಾಣಾಗಿರುವ ಜನಕ್ಕೆ ವರುಣ ತಂಪೆರೆಯಲು ಸಜ್ಜಾಗಿದ್ದು ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಮಳೆ ಇರಲಿದೆ ಎನ್ನಲಾಗಿದೆ. ಇದರ ಜೊತೆಯಲ್ಲಿ ಗಾಳಿಯ ವೇಗ ಕೂಡ ಅತ್ಯಂತ ತೀವ್ರವಾಗಿ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಗಾಳಿಯ ವೇಗವು ಗಂಟೆಗೆ 40 ಕಿಲೋಮೀಟರ್ ಇರಲಿದ್ದು, ಜನಸಾಮಾನ್ಯರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಹೀಟ್ ಸ್ಟ್ರೋಕ್ಗೆ ಮತ್ತೊಂದು ಬಲಿ : ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಾವು
ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ. ಮಲೆನಾಡಿನ ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



