ಉಡುಪಿ : ಬೈಕ್ ಕಳವು – ಆರೋಪಿಯ ಬಂಧನ, ವಾಹನ ವಶ

ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಕಳುವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಕಳುವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.

ಎಪ್ರಿಲ್18-ಮ ರಾತ್ರಿ 7:45ರ ಸುಮಾರಿಗೆ ಪಡುಬಿದ್ರಿ ಶ್ರೀ ನಾರಾಯಣ ಗುರು ಮಂದಿರದ ಬಳಿಯಲ್ಲಿ, ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಅವರು ತಮ್ಮ ತಮ್ಮನಿಗೆ ಸೇರಿದ ಯಮಹಾ ಎಫ್‌ಝಡ್ ಮೋಟಾರ್ ಸೈಕಲ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕ್ಯಾಂಟೀನ್‌ಗೆ ತೆರಳಿದ್ದರು.

Also Read: Udupi: ಉಡುಪಿಯ ಕುಖ್ಯಾತ ‘ಗರುಡ ಗ್ಯಾಂಗ್’ ಸದಸ್ಯನಿಗೆ ಗೂಂಡಾ ಕಾಯ್ದೆ

ಬಳಿಕ ವಾಪಸ್ಸು ಬಂದಾಗ ವಾಹನ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ತಂಡ ರಚಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಸುಮಾರು ರೂ.20,000 ಮೌಲ್ಯದ ಯಮಹಾ ಎಫ್‌ಝಡ್ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Bike theft case solved Accused arrested vehicle seized

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories