ಬಿರಿಯಾನಿ-ಕಲ್ಲಂಗಡಿ ಎಫೆಕ್ಟ್: ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು!

ರಾತ್ರಿ ಊಟಕ್ಕೆ ಬಿರಿಯಾನಿ ಸೇವಿಸಿ ಬಳಿಕ ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವು.

ರಾತ್ರಿ ಊಟಕ್ಕೆ ಬಿರಿಯಾನಿ ಸೇವಿಸಿ ಬಳಿಕ ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರ ರಾಜಧಾನಿ ಮುಂಬೈನ ಪೈಧೋನಿ ಎಂಬ ಪ್ರದೇಶದಲ್ಲಿ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸದಸ್ಯರ ಈ ನಿಗೂಢ ಸಾವು ಸುತ್ತಮುತ್ತಲಿನ ಪರಿಸರದಲ್ಲಿ ಆತಂಕಕ್ಕೆ ದಾರಿ ಮಾಡಿದೆ.

ಮೃತಪಟ್ಟವರೆಲ್ಲರೂ ಒಂದೇ ಕುಟುಂಬದ ಸದಸ್ಯರಾಗಿದ್ದು, ರಾತ್ರಿ ವೇಳೆ ಊಟಕ್ಕೆಂದು ಹೋಟೆಲ್​ನಿಂದ ಬಿರಿಯಾನಿ ಆರ್ಡರ್​ ಮಾಡಿದ್ದರು ಎನ್ನಲಾಗಿದೆ. ಬಿರಿಯಾನಿ ತಿಂದ ಬಳಿಕ ಆರೋಗ್ಯದಿಂದಲೇ ಇದ್ದ ನಾಲ್ವರು ಬಳಿಕ ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ತಿಂದಿದ್ದಾರೆ.

ಇದನ್ನೂ ಓದಿ : ಬಿಸಿಲ ಬೇಗೆಗೆ ಜೀವ ತೆತ್ತ ಶಿಕ್ಷಕರು: ಜನಗಣತಿ ಕಾರ್ಯಕ್ಕೆ ಕುತ್ತು ತಂದ ವರುಣನ ಮೌನ

ಏಕಾಏಕಿ ಮನೆಯ ಸದಸ್ಯರಿಗೆ ವಾಂತಿ, ತಲೆಸುತ್ತು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡಿದ್ದ ನಾಲ್ವರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆಯೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿರಿಯಾನಿ ತಿಂದು ಕಲ್ಲಂಗಡಿ ಸೇವಿಸಿದ ಬಳಿಕ ಈ ಕುಟುಂಬಸ್ಥರಿಗೆ ಏನಾಯ್ತು ಎಂಬುವುದೇ ಸದ್ಯದ ಯಕ್ಷ ಪ್ರಶ್ನೆಯಾಗಿದೆ. ಸದ್ಯ ಮೃತಪಟ್ಟವರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಈ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories