ಶಿಕ್ಷಣ ಇಲಾಖೆಯಿಂದ ಹೊಸ ರೂಲ್ಸ್‌..!  ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಬ್ರೇಕ್.!

ರಾಜ್ಯದ ಯಾವುದೇ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸುವಂತಿಲ್ಲ

ವಾರ್ಷಿಕ ಸ್ನೇಹ ಸಮ್ಮೇಳನ ಸೇರಿದಂತೆ ವಿವಿಧ ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡುವುದಕ್ಕೆ ಶಿಕ್ಷಣ ಇಲಾಖೆ ಬ್ರೇಕ್​ ಹಾಕಿದೆ. ಇನ್ಮುಂದೆ ರಾಜ್ಯದ ಯಾವುದೇ ಸರ್ಕಾರಿ , ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲೆ ಎನ್ನುವುದು ಜ್ಞಾನ ದೇಗುಲವಿದ್ದಂತೆ. ಇಲ್ಲಿ ಪ್ರತಿ ಮಗುವಿನ ಬೆಳವಣಿಗೆ, ಸಂಸ್ಕಾರ ಒಳ್ಳೆಯ ನಡತೆ, ವ್ಯಕ್ತಿತ್ವ ಪ್ರತಿಯೊಂದು ನಿರ್ಧಾರವಾಗುತ್ತದೆ. ಇಂತಹ ಬೆಳೆಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡಿಸುವುದು ಸೂಕ್ತವಲ್ಲ. ಈ ರೀತಿಯ ಗೀತೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ .

ಇದನ್ನೂ ಓದಿ : ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಸ್ಫೋಟಿಸಿ ದೇಶ ನಡುಗಿಸಿದ ಸಂಚುಕೋರನಿಗೆ ಈಗ ಜೈಲೇ ಗತಿ!

ಹೀಗಾಗಿ ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಗೀತೆಗಳ ನೃತ್ಯ ಮಾಡಿಸುವಂತಿಲ್ಲ. ನಿಯಮ ಮೀರಿ ನೃತ್ಯ ಮಾಡಿಸಿದ್ದು ಕಂಡುಬಂದಲ್ಲಿ ಶಾಲಾ ಮುಖ್ಯ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಅಲ್ಲದೇ ವಿದ್ಯಾರ್ಥಿಗಳಿಗೆ ರಾಷ್ಟ್ರಾಭಿಮಾನವನ್ನು ಮೂಡಿಸುವಂತಹ ಗೀತೆಗಳನ್ನು ಬಳಕೆ ಮಾಡುವಂತೆ ಶಿಕ್ಷಣ ಇಲಾಕೆ ಸೂಚನೆ ನೀಡಿದೆ. ಹಾಗೂ ಹಾಡುಗಳ ಮತ್ತು ನೃತ್ಯಗಳ ಆಯ್ಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯನ್ನು ನಿಭಾಯಿಸಬೇಕು. ಹಾಗೂ ವಿದ್ಯಾರ್ಥಿಗಳ ಉಡುಪು ಕೂಡ ಸಭ್ಯವಾಗಿರಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories