ಎಸ್‌ಎಸ್‌ಬಿ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಎಸ್‌ಎಸ್‌ಎಲ್‌ಸಿ ಪಾಸಾದವರು ಕೂಡಲೇ ಅರ್ಜಿ ಸಲ್ಲಿಸಿ

ಎಸ್‌ಎಸ್‌ಬಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮೇ 4ರ ಒಳಗೆ ಅರ್ಜಿ ಸಲ್ಲಿಸಿ.

SSB Constable Vacancy 2026: ಸರ್ಕಾರಿ ಉದ್ಯೋಗ ಹುಡುಕುತ್ತಿರುವ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರ ಪ್ರಕಾರ ಒಟ್ಟ 827 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಏಪ್ರಿಲ್‌ 20, 2026 ಎಂದು ನಿಗದಿಪಡಿಸಲಾಗಿತ್ತು. ಆ ಸಮಯದಲ್ಲಿ ಎಸ್ಎಸ್‌ಬಿ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಕೆಯನ್ನು ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಈಗ ಮತ್ತೊಂದು ಅವಕಾಶ ಒದಗಿಬಂದಿದೆ. ಎಸ್‌ಎಸ್‌ಬಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ದಿನಾಂಕವನ್ನು ಮೇ 4, 2026 ರವರೆಗೆ ವಿಸ್ತರಿಸಿದೆ. ಆಸಕ್ತ ಅರ್ಹಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಏನೆಲ್ಲಾ ಅರ್ಹತೆ ಹೊಂದಿರಬೇಕು ಎಂದು ನೋಡೋಣ.

ಹುದ್ದೆಯ ವಿವರ

ನೇಮಕಾತಿ ನಡೆಸುವವರು: ಎಸ್‌ಎಸ್‌ಬಿ

ಹುದ್ದೆಯ ಹೆಸರು : ಕಾನ್ಸ್‌ಟೇಬಲ್‌

ಒಟ್ಟು ಹುದ್ದೆಗಳು: 827

ಆರಂಭಿಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 21 ರಿಂದ ಏಪ್ರಿಲ್ 20, 2026

ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕ: ಮೇ 4, 2026

ಇದನ್ನೂ ಓದಿ: oracle layoffs : ದೈತ್ಯ ಕಂಪನಿಯಲ್ಲಿ 20,000ಕ್ಕೂ ಹೆಚ್ಚು ಸಿಬ್ಬಂದಿ ವಜಾ, AI ಅಬ್ಬರಕ್ಕೆ ಹಿರಿಯ ಉದ್ಯೋಗಿಗಳೂ ತತ್ತರ!

ಉದ್ಯೋಗ ಸ್ಥಳ : ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ ಹೇಗೆ? ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಮಟ್ಟ 3 ರಲ್ಲಿ ವೇತನ ದೊರೆಯಲಿದೆ. ಆರಂಭಿಕ ವೇತನ ₹21,700 ರಿಂದ ₹69,100 ವರೆಗೆ ಇರುತ್ತದೆ ಜೊತೆಗೆ ಹೆಚ್ಚುವರಿ ಭತ್ಯೆಯೂ ಇರಲಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ವೆಬ್‌ ಸೈಟ್‌ ssb.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories