“ಮೇ ತಿಂಗಳಲ್ಲಿ ಬರಲಿದ್ದಾನೆ ವರುಣ: ದಕ್ಷಿಣ ಒಳನಾಡಿನ ಜನರೇ ಎಚ್ಚರ!”
ಏಪ್ರಿಲ್ 30 ಹಾಗೂ ಮೇ 1ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.

ಬಿಸಿಲ ತಾಪಕ್ಕೆ ರಾಜ್ಯದ ಜನತೆ ಕಂಗೆಟ್ಟು ಹೋಗಿದ್ದಾರೆ. ಆದರೆ ಈ ನಡುವೆಯೇ ಮೇ ತಿಂಗಳನ್ನು ಮಳೆಯೊಂದಿಗೆ ಸ್ವಾಗತಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರಾಜ್ಯದ ಜನತೆ ಖುಷ್ ಆಗಿದ್ದಾರೆ. ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ 30 ಹಾಗೂ ಮೇ 1ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಇಂದು ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಏಪ್ರಿಲ್ 30ರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್: ‘3 ಇಡಿಯಟ್ಸ್’ 2 ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ ಆಮೀರ್ ಖಾನ್!
ಇನ್ನು ಈ ಅವಧಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿಯಲ್ಲಿ ಗರಿಷ್ಠ ತಾಪಮಾನ 32ರಿಂದ 36 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33ರಿಂದ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ. ರಾತ್ರಿ ವೇಳೆಗೆ ತಾಪಮಾನ 26 ಡಿಗ್ರಿ ಸೆಲ್ಸಿಯಸ್ಗೆ ಬರಲಿದೆ. ಮಳೆಯ ಮುನ್ಸೂಚನೆ ಇದ್ದರೂ ಸಹ, ಕರಾವಳಿ ಭಾಗದಲ್ಲಿ ಹವಾಮಾನವು ಆರ್ದ್ರತೆಯಿಂದ ಕೂಡಿದ್ದು, ಅತ್ಯಧಿಕ ಸೆಖೆಯ ಅನುಭವ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



