ರಾಜ್ಯದಲ್ಲಿ ಮುಂದಿನ 3 ದಿನ ವರುಣನ ಆರ್ಭಟ: ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ 3 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ

ಬಿಸಿಲಿನ ಶಾಖಕ್ಕೆ ನಲುಗಿ ಹೋಗಿದ್ದ ರಾಜ್ಯದ ಜನತೆ ಸದ್ಯ ಮಳೆಯ ಸಿಂಚನಕ್ಕೆ ಸಾಕ್ಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸುರಿದ ಮಳೆ ದುರಂತಗಳ ಮೇಲೆ ದುರಂತಗಳನ್ನು ಸೃಷ್ಠಿಸಿರುವುದು ಒಂದೆಡೆಯಾದರೆ ರಾಜ್ಯದ ವಿವಿಧೆಡೆಗಳಲ್ಲಿ ವಾತಾವರಣ ತಂಪಾಗಿದೆ. ‌

ಈ ಎಲ್ಲದರ ನಡುವೆ ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟೂ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ.

ಇದನ್ನೂ ಓದಿ : ಮಳೆಗೆ ನಲುಗಿದ ರಾಜಧಾನಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ – ಬೆಸ್ಕಾಂ ವಿರುದ್ಧ ಜನಾಕ್ರೋಶ!

ಇಂದು ಹಾಗೂ ನಾಳೆ ದಕ್ಷಿಣ ಒಳನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ರಾಮನಗರ ಭಾಗಗಳಲ್ಲಿ ಮಳೆಯ ಪ್ರಮಾಣ 115.5mm ವರೆಗೆ ಇರಲಿದೆ ಎನ್ನಲಾಗಿದೆ. ಮಳೆಯ ಜೊತೆಗೆ ಗಾಳಿ ಕೂಡ ಗಂಟೆಗೆ 30 ಕಿಲೋಮೀಟರ್​ ವೇಗದಲ್ಲಿ ಬೀಸಲಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಉಡುಪಿ: ತ್ರಾಸಿ ಬಳಿ ಪ್ರವಾಸಿ ಬಸ್ -ಟ್ಯಾಂಕರ್ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

ಇನ್ನು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮಳೆ ಆರಂಭಗೊಂಡಿದೆ. ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸಂಭವಿಸಲಿದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮುಂದಿನ 3 ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories