ಪಂಜಾಬ್ ವಿಧಾನಸಭೆಯಲ್ಲಿ ಹೈಡ್ರಾಮಾ! ಸಿಎಂ ಭಗವಂತ್ ಮಾನ್ ವಿರುದ್ಧ ಮದ್ಯಸೇವನೆ ಆರೋಪ!

ಪಂಜಾಬ್​ನಲ್ಲಿರುವ ಆಮ್​ ಆದ್ಮಿ ಪಕ್ಷ ಸರ್ಕಾರದ ಮುಖ್ಯಮಂತ್ರಿ ಭಗವಂತ್​ ಮಾನ್​ ವಿರುದ್ಧ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಪಂಜಾಬ್​ನಲ್ಲಿರುವ ಆಮ್​ ಆದ್ಮಿ ಪಕ್ಷ ಸರ್ಕಾರದ ಮುಖ್ಯಮಂತ್ರಿ ಭಗವಂತ್​ ಮಾನ್​ ವಿರುದ್ಧ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಶುಕ್ರವಾರ ನಡೆದ ವಿಶೇಷ ಅಧಿವೇಶನದಲ್ಲಿ ಗಂಭೀರ ಆರೋಪ ಪ್ರತ್ಯಾರೋಪಗಳನ್ನು ಮಾಡಲಾಗಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ಸೇವಿಸಿ ಸದನಕ್ಕೆ ಬರುತ್ತಾರೆ ಎಂದು ಗಂಭೀರ ಆರೋಪ ಮಾಡಿದ ಪ್ರತಿಪಕ್ಷಗಳು, ಅವರಿಗೆ ಕೂಡಲೇ ಆಲ್ಕೋಹಾಲ್ ಪತ್ತೆ ಪರೀಕ್ಷೆ ನಡೆಸಬೇಕೆಂದು ಪಟ್ಟು ಹಿಡಿದ ಪ್ರಸಂಗ ನಡೀತು.

ವಿಶೇಷ ಅಧಿವೇಶನದಲ್ಲಿ, ಕಾಂಗ್ರೆಸ್ ಶಾಸಕ ಸುಖ್‌ಪಾಲ್ ಸಿಂಗ್ ಖಾರಿಯಾ ಮೊಬೈಲ್ ಬಳಸುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದು ಉಭಯ ನಾಯಕರ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಖಾರಿಯಾ ಅವರು, ಸಿಎಂ ಮದ್ಯಪಾನ ಮಾಡಿ ಸದನಕ್ಕೆ ಬಂದಿದ್ದಾರೆ ಎಂದು ನೇರ ಆರೋಪ ಮಾಡಿದರು.
ಖಾರಿಯಾ ಅವರ ಆರೋಪಕ್ಕೆ ಪ್ರತಿಪಕ್ಷ ನಾಯಕ ಪ್ರತಾಪ್‌ ಸಿಂಗ್‌ ಬಾಜ್ವಾ ಅವರೂ ದನಿ ಸೇರಿಸಿದ್ದು, ಸಿಎಂ ಸೇರಿ ಎಲ್ಲಾ ಶಾಸಕರು ಮದ್ಯಪಾನ ಪತ್ತೆ ಪರೀಕ್ಷೆಗೆ ಒಳಪಡಬೇಕು ಎಂದು ಆಗ್ರಹಿಸಿದರು. ಈ ನಿರ್ಧಾರವನ್ನು ಬೆಂಬಲಿಸಿದ ಅಕಾಲಿದಳ ಕೂಡ ‘ಸಾರ್ವಜನಿಕ ಡೋಪ್ ಟೆಸ್ಟ್’ಗೆ ಆಗ್ರಹಿಸಿತು.

ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಭರ್ಜರಿ ಗುಡ್ ನ್ಯೂಸ್! ಏನಿದು 600 ಕೋಟಿ ಪ್ಲಾನ್? ಇಲ್ಲಿದೆ ಮಾಹಿತಿ

ಗದ್ದಲದಿಂದಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. ಆದರೆ, ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಅವರು ವಿಪಕ್ಷಗಳ ಈ ಬೇಡಿಕೆಯನ್ನು ತಿರಸ್ಕರಿಸಿದರು. ಇದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಸದನದಿಂದ ಹೊರನಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories