ಪ್ಯಾರಾಮೆಡಿಕಲ್ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಕಡ್ಡಾಯವಲ್ಲ! ವಿದ್ಯಾರ್ಥಿಗಳ ಹಿತ ಕಾಯಲು ಕೋರ್ಟ್ ಮಹತ್ವದ ನಿರ್ಧಾರ

ಪ್ಯಾರಾ ಮೆಡಿಕಲ್​ ಕೋರ್ಸ್​ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಡೆದೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ

ಪ್ಯಾರಾ ಮೆಡಿಕಲ್​ ಕೋರ್ಸ್​ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಡೆದೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಪ್ರಸಕ್ತ ಸಾಲಿನಲ್ಲಿ ಪ್ಯಾರಾಮೆಡಿಕಲ್​ ಕೋರ್ಸ್​ಗೆ ಪ್ರವೇಶಾತಿ ಪಡೆಯುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಬಿಗ್​ ರಿಲೀಫ್​ ದೊರಕಿದಂತಾಗಿದೆ.

ಪ್ಯಾರಾಮೆಡಿಕಲ್​ ಕೋರ್ಸ್​ಗೆ ಪ್ರವೇಶಾತಿ ಪಡೆಯಲು ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿದ್ದರೆ ಸಾಲುತ್ತಿತ್ತು. ಆದರೆ ಇದರಲ್ಲಿ ಬದಲಾವಣೆ ತಂದ ಸರ್ಕಾರ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು ಎಂದು ಹೊಸ ನಿಯಮಾವಳಿ ರೂಪಿಸಿತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಾಹುಬಲಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಸೇರಿದಂತೆ ಒಟ್ಟು 51ಕ್ಕೂ ಹೆಚ್ಚು ಕಾಲೇಜುಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು.

ಇದನ್ನೂ ಓದಿ : ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ! ಖಾತೆಗೆ 6 ಸಾವಿರ ನೇರ ಜಮೆ, ಅರ್ಜಿ ಸಲ್ಲಿಸಿ

ನ್ಯಾಯಮೂರ್ತಿ ಇ.ಎಸ್​ ಇಂದಿರೇಶ್​ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶವನ್ನು ನೀಡಿದ್ದು, ಹೊಸ ನಿಯಮಗಳನ್ನು ರೂಪಿಸುವವರೆಗೆ ಹಳೆಯ ಪದ್ಧತಿಯನ್ನೇ ಮುಂದುವರಿಸಲು ಅವಕಾಶ ನೀಡಲಾಗಿತ್ತು, ಅದನ್ನು ಉಲ್ಲಂಘಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಪ್ರಸ್ತುತ ಹಳೆಯ ನಿಯಮದಂತೆ ಪ್ರವೇಶಾತಿ ನಡೆಸಲು ಅನುಮತಿ ನೀಡಲಾಗಿದ್ದರೂ, ಈ ಆದೇಶವು ಸುಪ್ರೀಂಕೋರ್ಟ್ ನೀಡಲಿರುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್​ ಹೇಳಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories