ಯೂನಿಯನ್ ಬ್ಯಾಂಕ್‌ನಲ್ಲಿ 1865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: ಪದವೀಧರರು ಅರ್ಜಿ ಹಾಕಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1,865 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಮೇ 19 ರವರೆಗೆ ಆಸಕ್ತ ಅರ್ಹ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಬ್ಯಾಂಕ್ ನಂತಹ ಸುರಕ್ಷಿತ ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಕನಸು ಕಾಣುತ್ತಿರುವ ಪದವೀಧರರಿಗೆ ಸುವರ್ಣಾವಕಾಶ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಭಾರತದಾದ್ಯಂತ ಒಟ್ಟಯ 1865 ಅಪ್ರೆಂಟಿಸ್‌ಶಿಪ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಮೇ 19 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ unionbankofindia.bank.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಸ್ಟ್ರೀಮ್‌ನಲ್ಲಿ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ
ಯೂನಿಯನ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ: 101 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ!
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಪುರುಷ ಅಭ್ಯರ್ಥಿಗಳು 944 ರೂ. ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ಮತ್ತು ಒಬಿಸಿ ಮಹಿಳಾ ಅಭ್ಯರ್ಥಿಗಳು 708 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ವರ್ಗಗಳಿಗೆ ಶುಲ್ಕವು 236 ರೂ. ಆಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಯೂನಿಯನ್ ಬ್ಯಾಂಕ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು. ನಂತರ ಅರ್ಜಿ ಶುಲ್ಕವನ್ನು ಪಾವತಿಸಿ. ಇನ್ನೊಮ್ಮೆ ಅರ್ಜಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬೇಕು.



