ವಿಜಯ್-ಕಾಂಗ್ರೆಸ್ ದೋಸ್ತಿ: ಕಾವೇರಿ ವಿವಾದಕ್ಕೆ ಬೀಳುತ್ತಾ ಬ್ರೇಕ್? ಕನ್ನಡಿಗರಿಗೆ ಕಾದಿದೆ ಬಂಪರ್ ಸುದ್ದಿ!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್​​ ಇದೀಗ ಟಿವಿಕೆ ಪಕ್ಷದೊಂದಿಗೆ ಕೈ ಜೋಡಿಸುವುದರ ಹಿಂದೆಯೂ ಕಾರಣವಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್​ ಅವರ ತಮಿಳಿಗ ವೇಟ್ರಿ ಕಳಗಂ ಅಭೂತಪೂರ್ವ ಯಶಸ್ಸು ಸಾಧಿಸಿದೆ ಆದರೂ ಸ್ವತಂತ್ರ್ಯವಾಗಿ ಸರ್ಕಾರ ರಚನೆ ಮಾಡುವಷ್ಟು ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡಲು 118 ಸ್ಥಾನಗಳು ಬೇಕು. ಆದರೆ 108 ಸ್ಥಾನಗಳಲ್ಲಿ ಜಯಭೇರಿ ಬಾರಿಸಿರುವ ತಮಿಳಿಗ ವೇಟ್ರಿ ಕಳಗಂ ಪಕ್ಷವು ಉಳಿದ 10 ಸ್ಥಾನಗಳಿಗಾಗಿ ಕಾಂಗ್ರೆಸ್​ ಬೆಂಬಲ ಕೇಳಿದೆ ಎನ್ನಲಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್​​ ಇದೀಗ ಟಿವಿಕೆ ಪಕ್ಷದೊಂದಿಗೆ ಕೈ ಜೋಡಿಸುವುದರ ಹಿಂದೆಯೂ ಕಾರಣವಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರದಲ್ಲಿ ಇರಬಾರದು ಹಾಗೂ ಜಾತ್ಯಾತೀತ ಪಕ್ಷವೇ ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿ ಇರಬೇಕು ಎಂಬ ಉದ್ದೇಶದೊಂದಿಗೆ ಕಾಂಗ್ರೆಸ್​ ಈ ಮೈತ್ರಿಗೆ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟ 73 ಸ್ಥಾನಗಳಲ್ಲಿ ಗೆದ್ದಿದ್ದು, ಡಿಎಂಕೆ 59 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್ ಸ್ಪರ್ಧಿಸಿದ್ದ 28 ಸ್ಥಾನಗಳಲ್ಲಿ ಐದರಲ್ಲಿ ಗೆದ್ದಿದೆ. ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಇಂತಹ ರೈತರಿಗೆ ಸಿಗಲ್ಲ! ಹೊಸ ಪಟ್ಟಿ

ತಮಿಳುನಾಡಿನಲ್ಲಿ ಕಾಂಗ್ರೆಸ್​ ಮೈತ್ರಿ ಸರ್ಕಾರದೊಂದಿಗೆ ಕೈ ಜೋಡಿಸಿದರೆ ಕರ್ನಾಟಕಕ್ಕೆ ಭಾರೀ ಪ್ರಮಾಣದಲ್ಲಿ ಲಾಭವಾಗಲಿದೆ. ಏಕೆಂದರೆ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಅನೇಕ ವರ್ಷಗಳಿಂದ ಕಾವೇರಿ ವಿವಾದವಿದೆ. ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದರೆ ಯಾವುದೇ ರಾಜಕೀಯ ಸಂಘರ್ಷಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಎರಡೂ ರಾಜ್ಯದವರು ನೀರು ಹಂಚಿಕೆ ವಿಚಾರದಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ ಎಂಬುದು ಸದ್ಯದ ಲೆಕ್ಕಾಚಾರವಾಗಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories