ಕೋಟ: ಗಿನ್ನಿಸ್ ದಾಖಲೆಯ ಈಜು ಪಟು ಗೋಪಾಲ ಖಾರ್ವಿಗೆ ಲಕ್ಷಾಂತರ ರೂಪಾಯಿ ವಂಚನೆ

ಕೋಟ: ಗಿನ್ನಿಸ್ ದಾಖಲೆಯ ಈಜುಪಟು ಓರ್ವರಿಗೆ ನಂಬಿದ ಸಂಬಂಧಿಕರೇ ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು, ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಘಟನೆ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೋಟ: ಗಿನ್ನಿಸ್ ದಾಖಲೆಯ ಈಜುಪಟು ಓರ್ವರಿಗೆ ನಂಬಿದ ಸಂಬಂಧಿಕರೇ ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು, ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಘಟನೆ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಉಡುಪಿ ಜಿಲ್ಲೆಯ ಗುಂಡ್ಮಿ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಈಜು ತರಬೇತುದಾರ, ಗಿನ್ನಿಸ್ ದಾಖಲೆಯ ಈಜುಪಟು ಗೋಪಾಲ ಖಾರ್ವಿ (50 ವರ್ಷ ) ಎಂಬುವವರೇ ವಂಚನೆಗೆ ಒಳಗಾದವರು.. ಇವರಿಂದ ಅವರ ಸಂಬಂಧಿಗಳಾದ ರವೀಂದ್ರ ಖಾರ್ವಿ ಮತ್ತು ಪ್ರೀತು ಎಂಬುವವರು ವ್ಯವಹಾರದ ಉದ್ದೇಶಕ್ಕಾಗಿ ಹಂತ ಹಂತವಾಗಿ ಒಟ್ಟು 9,50,000/- ರೂಪಾಯಿ ಹಣವನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ಪಡೆದ ಹಣದ ಪೈಕಿ ಆರೋಪಿಗಳು ಇದುವರೆಗೆ 6,27,000/- ರೂಪಾಯಿಗಳನ್ನು ಮಾತ್ರ ಮರಳಿಸಿದ್ದಾರೆ. ಆದರೆ, ಬಾಕಿ ಇರುವ 3,23,000/- ರೂಪಾಯಿ ಹಣವನ್ನು ನೀಡದೆ ಸತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೋಪಾಲ ಖಾರ್ವಿ ಅವರು ತಮ್ಮ ನ್ಯಾಯಸಮ್ಮತವಾದ ಬಾಕಿ ಹಣವನ್ನು ಕೇಳಲು ಹೋದಾಗ, ಆರೋಪಿಗಳು ಹಣ ನೀಡಲು ನಿರಾಕರಿಸಿದ್ದಲ್ಲದೆ, “ಇವತ್ತು ಕೊಡುತ್ತೇವೆ, ನಾಳೆ ಕೊಡುತ್ತೇವೆ” ಎಂದು ದಿನ ದೂಡುತ್ತಾ ಕಾಲಹರಣ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಹಣ ಕೇಳಿದ್ದಕ್ಕೆ ಪಿರ್ಯಾದಿದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Also Read: ಬ್ರಹ್ಮಾವರ: ಮಟ್ಕಾ ದಂಧೆಕೋರನ ಮೇಲೆ ಪೊಲೀಸರ ದಾಳಿ

ತಮಗೆ ವಂಚಿಸುವ ಉದ್ದೇಶದಿಂದಲೇ ಆರೋಪಿಗಳು ಹಣ ಪಡೆದು, ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ಸಂತ್ರಸ್ತರು ನ್ಯಾಯಾಲಯದ ಮೊರೆ ಹೋಗಿದ್ದರು. ಮಾನ್ಯ ನ್ಯಾಯಾಲಯದ ಖಾಸಗಿ ದೂರಿನ ಅನ್ವಯ, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 316(2) (ನಂಬಿಕೆ ದ್ರೋಹ), 318(4) (ವಂಚನೆ), 351, 352 ಹಾಗೂ 190 ರ ಅಡಿಯಲ್ಲಿ ಅಪರಾಧ ಕ್ರಮಾಂಕ 77/2026 ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Kota Guinness World Record swimmer Gopal Kharvi cheated of lakhs of rupees

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories