ತೈಲ ಬಳಕೆ ತಗ್ಗಿಸಿ, ಚಿನ್ನ ಖರೀದಿಸಲೇ ಬೇಡ: ಪ್ರಧಾನಿ ಮೋದಿ ಮಹತ್ವದ ಕರೆ, ವರ್ಕ್‌ ಫ್ರಂ ಹೋಮ್‌ ಕಡ್ಡಾಯ

ಖಾಸಗಿ ಮತ್ತು ಕಾರ್ಪೊರೇಟ್ ವಲಯದ ಕಂಪನಿಗಳಿಗೆ ಪ್ರಧಾನಿ ಮಹತ್ವದ ಸಲಹೆಯನ್ನು ನೀಡಿದ್ದಾರೆ. ನೌಕರರಿಗೆ ಸಾಧ್ಯವಿರುವ ಕಡೆಗಳಲ್ಲಿ 'ವರ್ಕ್‌ ಫ್ರಂ ಹೋಮ್‌' (ಮನೆಯಿಂದಲೇ ಕೆಲಸ) ಸೌಲಭ್ಯವನ್ನು ನೀಡುವಂತೆ ಮನವಿ ಮಾಡಿದ್ದಾರೆ.

ನವದೆಹಲಿ: ಭಾರತದ ದೇಶದ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರಿಗೆ ಅತ್ಯಂತ ಮಹತ್ವದ ಹಾಗೂ ತುರ್ತು ಮನವಿ ಮಾಡಿದ್ದಾರೆ. ದೇಶದ ಆರ್ಥಿಕ ಶಿಸ್ತು ಕಾಪಾಡಲು ಮತ್ತು ಆಮದು ಮೇಲಿನ ಅವಲಂಬನೆಯನ್ನು ತಗ್ಗಿಸಲು ಪ್ರಧಾನಿಯವರು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ.

ಚಿನ್ನದ ಮೇಲಿನ ವ್ಯಾಮೋಹ ಬಿಡಿ – ದೇಶಕ್ಕೆ ಶಕ್ತಿ ತುಂಬಿ

ಭಾರತವು ವಿಶ್ವದ ಅತಿದೊಡ್ಡ ಚಿನ್ನದ ಆಮದುದಾರ ದೇಶಗಳಲ್ಲಿ ಒಂದಾಗಿದೆ. ಚಿನ್ನದ ಆಮದಿಗಾಗಿ ದೇಶದ ಅಮೂಲ್ಯವಾದ ವಿದೇಶಿ ವಿನಿಮಯವು ದೊಡ್ಡ ಪ್ರಮಾಣದಲ್ಲಿ ವ್ಯಯವಾಗುತ್ತಿದೆ. ಇದನ್ನು ಗಮನಿಸಿರುವ ಪ್ರಧಾನಿ ಮೋದಿ, “ಕನಿಷ್ಠ ಒಂದು ವರ್ಷದ ಮಟ್ಟಿಗೆ ಚಿನ್ನದ ಖರೀದಿಯನ್ನು ಮುಂದೂಡಿ” ಎಂದು ಕರೆ ನೀಡಿದ್ದಾರೆ. ಚಿನ್ನದ ಮೇಲಿನ ಹೂಡಿಕೆಯನ್ನು ಕಡಿಮೆ ಮಾಡುವ ಮೂಲಕ ದೇಶದ ಆರ್ಥಿಕ ಹರಿವನ್ನು ಉತ್ಪಾದನಾ ವಲಯಕ್ಕೆ ತಿರುಗಿಸುವುದು ಪ್ರಧಾನಿಯವರ ಈ ಕರೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ತೈಲ ಬಳಕೆ ಕಡಿಮೆ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ಆಮದು ಭಾರತದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಿದೆ. ಹೀಗಾಗಿ, ಸಾರ್ವಜನಿಕರು ಅನಗತ್ಯ ಪ್ರಯಾಣಗಳನ್ನು ತಪ್ಪಿಸುವ ಮೂಲಕ ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸುವ ಮೂಲಕ ತೈಲ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಪ್ರಧಾನಿ ತಿಳಿಸಿದ್ದಾರೆ. ಇದು ಕೇವಲ ಹಣ ಉಳಿತಾಯ ಮಾತ್ರವಲ್ಲದೆ, ಇಂಧನ ಭದ್ರತೆ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದಲೂ ಅತೀ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ನೌಕರರಿಗೆ ಕಡ್ಡಾಯ ವರ್ಕ್‌ ಫ್ರಂ ಹೋಮ್‌ (WFH)

ಖಾಸಗಿ ಮತ್ತು ಕಾರ್ಪೊರೇಟ್ ವಲಯದ ಕಂಪನಿಗಳಿಗೆ ಪ್ರಧಾನಿ ಮಹತ್ವದ ಸಲಹೆಯನ್ನು ನೀಡಿದ್ದಾರೆ. ನೌಕರರಿಗೆ ಸಾಧ್ಯವಿರುವ ಕಡೆಗಳಲ್ಲಿ ‘ವರ್ಕ್‌ ಫ್ರಂ ಹೋಮ್‌’ (ಮನೆಯಿಂದಲೇ ಕೆಲಸ) ಸೌಲಭ್ಯವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದರಿಂದ ರಸ್ತೆಗಳಲ್ಲಿ ವಾಹನ ಸಂಚಾರ ಕಡಿಮೆಯಾಗಿ ಇಂಧನ ಉಳಿತಾಯವಾಗಲಿದೆ ಹಾಗೂ ಕಚೇರಿಗಳ ನಿರ್ವಹಣಾ ವೆಚ್ಚವೂ ತಗ್ಗಲಿದೆ. ಇದು ದೇಶದ ಒಟ್ಟಾರೆ ಇಂಧನ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಇಳಿಸಲು ನೆರವಾಗಲಿದೆ ಎಂಬುದು ಮೋದಿ ಅವರ ದೂರದೃಷ್ಟಿಯಾಗಿದೆ.

Also Read: 200 ಯೂನಿಟ್ ಉಚಿತ ವಿದ್ಯುತ್! ಸಿಎಂ ಆದ ಮೊದಲ ದಿನವೇ ವಿಜಯ್‌ ಭರ್ಜರಿ ಘೋಷಣೆ

ದೇಶದ ಜನತೆ ಸಂಕಲ್ಪ ಮಾಡಿದರೆ ಯಾವುದೇ ಆರ್ಥಿಕ ಸವಾಲನ್ನು ಎದುರಿಸಬಹುದು ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ದೇಶದ ಹಿತದೃಷ್ಟಿಯಿಂದ ಸಾರ್ವಜನಿಕರು ಈ ವಿಷಯದಲ್ಲಿ ಸಹಕಾರ ನೀಡಬೇಕು. ನಮ್ಮ ಸಣ್ಣ ಉಳಿತಾಯ ಮತ್ತು ಇಂಧನ ಸಂರಕ್ಷಣೆ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲಿದೆ” ಎಂದು ಅವರು ಭಾವನಾತ್ಮಕವಾಗಿ ನುಡಿದಿದ್ದಾರೆ.

ಪ್ರಧಾನಿಯವರ ಈ ಕರೆ ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿಯ ಮೌಲ್ಯವನ್ನು ಸ್ಥಿರಗೊಳಿಸಲು ಮತ್ತು ದೇಶವನ್ನು ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಲು ಪ್ರೇರಣೆಯಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

pm narendra modi appeal oil consumption gold purchase work from home suggestion

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories