ಹೀಟ್‌ವೇವ್ಸ್‌ ಎಫೆಕ್ಟ್‌: ಶಾಲೆಗಳಿಗೆ ಆನ್‌ಲೈನ್‌ ಕ್ಲಾಸ್‌ ಕಡ್ಡಾಯ? ಪ್ರಧಾನಿ ಮೋದಿ ಮಹತ್ವದ ಸೂಚನೆ!

ಕೋವಿಡ್‌ ಕಾಲದಲ್ಲಿ ಶೈಕ್ಷಣಿಕ ಸಂಸ್ಥೆಗಳು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದವು. ಇದೀಗ ಕೋವಿಡ್‌ ಮಾದರಿಯಲ್ಲೇ ಶಾಲೆಗಳು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆಯನ್ನು ಅನುಸರಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ. ಒಂದೆಡೆ ಹೀಟ್‌ ವೇವ್ಸ್‌ಗೆ ಜನರು ತತ್ತರಿಸಿದ್ದಾರೆ.

ಕೋವಿಡ್‌ ಕಾಲದಲ್ಲಿ ಶೈಕ್ಷಣಿಕ ಸಂಸ್ಥೆಗಳು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದವು. ಇದೀಗ ಕೋವಿಡ್‌ ಮಾದರಿಯಲ್ಲೇ ಶಾಲೆಗಳು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆಯನ್ನು ಅನುಸರಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ. ಒಂದೆಡೆ ಹೀಟ್‌ ವೇವ್ಸ್‌ಗೆ ಜನರು ತತ್ತರಿಸಿದ್ದಾರೆ.

ಮತ್ತೊಂದೆಡೆ ಜಾಗತಿಕ ಮಟ್ಟದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ಆಗುತ್ತಿದೆ. ಇದು ಭಾರತದ ಆರ್ಥಿಕತೆಯ ಮೇಲೆ ಒತ್ತಡ ಉಂಟು ಮಾಡುತ್ತಿದೆ. ಇಂಧನ ಬಳಕೆಯನ್ನು ಕಡಿಮೆ ಮಾಡಲು ಪ್ರಧಾನಿಯವರು ಈ ಕೆಳಗಿನ ಕಾರಣಗಳಿಗಾಗಿ ಆನ್‌ಲೈನ್ ತರಗತಿಗಳ ಮೊರೆ ಹೋಗಲು ಕರೆ ನೀಡಿದ್ದಾರೆ.

ಕೆಲವು ಶಾಲೆಗಳು ಮಾತ್ರವಲ್ಲದೇ ಖಾಸಗಿ ಕಂಪೆನಿಗಳು ಸಹ ವರ್ಕ್‌ ಫ್ರಮ್‌ ಹೋಮ್‌ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಅನಗತ್ಯವಾಗಿ ಪೆಟ್ರೋಲ್‌, ಡಿಸೇಲ್‌ ಬಳಕೆ ಕಡಿಮೆ ಮಾಡಬೇಕು. ಸಾರ್ವಜನಿಕರು ಮೆಟ್ರೋ, ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು.

Also Read: ತೈಲ ಬಳಕೆ ತಗ್ಗಿಸಿ, ಚಿನ್ನ ಖರೀದಿಸಲೇ ಬೇಡ: ಪ್ರಧಾನಿ ಮೋದಿ ಮಹತ್ವದ ಕರೆ, ವರ್ಕ್‌ ಫ್ರಂ ಹೋಮ್‌ ಕಡ್ಡಾಯ

ಅನಗತ್ಯ ವಿದೇಶಿ ಪ್ರವಾಸವನ್ನು ಮೂಂದೂಡುವಂತೆಯೂ ಸಲಹೆ ನೀಡಿದ್ದಾರೆ. ಭಾರತದ ಹಲವು ರಾಜ್ಯಗಳು ತೀವ್ರ ಬಿಸಿಗಾಳಿಗೆ ತತ್ತರಿಸಿ ಹೋಗಿದ್ದು, ಶಾಲೆಗಳ ಅವಧಿಯಲ್ಲಿಯೂ ಮಹತ್ವದ ಬದಲಾವಣೆ ಆಗುವ ಸಾಧ್ಯತೆಯಿದೆ. ಮಾತ್ರವಲ್ಲದೇ ಸದ್ಯ ಬೇಸಿಗೆ ರಜೆಯ ಅವಧಿಯನ್ನು ಇನ್ನಷ್ಟು ವಿಸ್ತರಣೆ ಮಾಡಲು ಚಿಂತನೆಗಳು ನಡೆದಿವೆ. ಇಂಧನ ಉಳಿತಾಯದ ನಿಟ್ಟಿನಲ್ಲಿ ಮೋದಿ ಅವರು ನೀಡಿರುವ ಸಲಹೆಗೆ ಸದ್ಯ ದೇಶದಾದ್ಯಂತ ಬಾರೀ ಚರ್ಚೆ ನಡೆಯುತ್ತಿದೆ.

Heatwave Effect Online classes mandatory for schools Prime Minister Modi important instruction

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories