ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಅವರಿಗೆ ಸೇರಿದ ಬೆಂಗಳೂರಿನ ವಯ್ಯಾಲಿಕಾವಲ್ ಹಾಗೂ ಬಿಡದಿಯಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಇದೇ ವೇಳೆಯಲ್ಲಿ ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ ಪೆಡ್ಲರ್ಸ್ ಗಳ ಜೊತೆಗೆ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆನ್ನಲಾಗಿದೆ.
ರಿಕ್ಕಿ ರೈಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಬಿಡದಿಯಲ್ಲಿರುವ ತೋಟದ ಮನೆಗೆ ಕರೆದೊಯ್ಯುತ್ತಿದ್ದಾರೆ. ತೋಟದ ಮನೆಯಲ್ಲಿಯೂ ಹೆಚ್ಚಿನ ವಿಚಾರಣೆ ಹಾಗೂ ಶೋಧ ಕಾರ್ಯ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.