ಕಿಂಗ್ ಕೊಹ್ಲಿ ಸೆಂಚುರಿ ಆರ್ಭಟ: ಕೋಲ್ಕತ್ತಾ ಕದನ ಗೆದ್ದು ಅಂಕಪಟ್ಟಿಯ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!
ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಕಳೆದ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ ‘ರನ್ ಮಷಿನ್’ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ಹಳೆಯ ಲಯಕ್ಕೆ ಮರಳಿದರು.
ಕೆಕೆಆರ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಕೊಹ್ಲಿ, ಕೇವಲ 60 ಎಸೆತಗಳಲ್ಲಿ ಅಜೇಯ 105 ರನ್ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಅವರು ಈ ಶತಕದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ 14,000 ರನ್ ಪೂರೈಸಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿದ್ದಾರೆ. ಅಲ್ಲದೇ ವಿಶ್ವದ ವೇಗದ ಬ್ಯಾಟರ್ ಆಟಗಾರಾಗಿ ಹೊರ ಹೊಮ್ಮಿದ್ದಾರೆ. ವಿರಾಟ್ ಕೊಹ್ಲಿ 409 ಇನ್ನಿಂಗ್ಸ್ ಮೂಲಕ ಈ ದಾಖಲೆ ಬರೆದಿದ್ರೆ, ಕ್ರಿಸ್ ಗೇಲ್ 423 ಇನ್ನಿಂಗ್ಸ್ ನಲ್ಲಿ ಈ ಸಾಧನೆಯನ್ನು ಮಾಡಿದ್ದರು. ಅದ್ರಲ್ಲೂ ಕೆಕೆಆರ್ ತಂಡದ ವಿರುದ್ಧ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯಾದ್ಯಂತ ವರುಣನ ಆರ್ಭಟ: ಮುಂದಿನ 5 ದಿನ ಬಾರೀ ಮಳೆ, ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!
ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್, ಯುವ ಆಟಗಾರ ಅಂಗ್‌ಕ್ರಿಶ್ ರಘುವಂಶಿ ಮತ್ತು ರಿಂಕು ಸಿಂಗ್ ಭರ್ಜರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್‌ಗಳನ್ನು ಕಲೆ ಹಾಕಿತ್ತು. ಕೆಕೆಆರ್ ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ತಂಡಕ್ಕೆ ಆರಂಭಿಕ ಆಘಾತ ಎದುರಾದರೂ, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ 92 ರನ್‌ಗಳ ಜೊತೆಯಾಟ ತಂಡವನ್ನು ಗೆಲುವಿನ ಹತ್ತಿರಕ್ಕೆ ಕೊಂಡೊಯ್ದಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಒಟ್ಟು 12 ಪಂದ್ಯಗಳಲ್ಲಿ 8 ಜಯದೊಂದಿಗೆ 16 ಅಂಕಗಳನ್ನು ಗಳಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಮೊದಲ ಸ್ಥಾನಕ್ಕೇರಿದೆ. ಗುಜರಾತ್ ಟೈಟಾನ್ಸ್ ಕೂಡ 16 ಅಂಕಗಳನ್ನು ಹೊಂದಿದ್ದರೂ, ಉತ್ತಮ ನೆಟ್ ರನ್ ರೇಟ್ ಹೊಂದಿರುವ ಬೆಂಗಳೂರು ತಂಡ ಅಗ್ರಸ್ಥಾನ ಕಾಯ್ದುಕೊಂಡಿದೆ. ಸನ್‌ರೈಸಸ್ ಹೈದ್ರಾಬಾದ್ ತಂಡ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಉಳಿದಂತೆ ಒಂದು ಸ್ಥಾನಕ್ಕೆ ಐದು ತಂಡಗಳು ಪೈಪೋಟಿ ನಡೆಸಬೇಕಾಗಿದೆ.



