ಮಳೆಯ ರೌದ್ರನರ್ತನಕ್ಕೆ ನಲುಗಿದ ಕರ್ನಾಟಕ – ಗುಡುಗು, ಸಿಡಿಲಿಗೆ 6 ಸಾವು, ಮೇ 17ರವರೆಗೆ ಹೈ ಅಲರ್ಟ್‌

ಕಳೆದ 24 ಗಂಟೆಗಳಲ್ಲಿ ಸುರಿದ ಬಾರೀ ಬಿರುಗಾಳಿ ಮಳೆಗೆ 6 ಮಂದಿ ಬಲಿ

ಬಿಸಿಲ ಝಳದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ತಂಪೆರೆದಿದ್ದರೂ ಕೂಡ, ಕಳೆದ 24 ಗಂಟೆಗಳಲ್ಲಿ ಸುರಿದ ಬಾರೀ ಬಿರುಗಾಳಿ ಮಳೆಗೆ 6 ಮಂದಿ ಬಲಿಯಾಗಿದ್ದಾರೆ. ಮಳೆಯ ಆರ್ಭಟದಿಂದಾಗಿ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿನ್ನೆ ಸಿಡಿಲು ಗುಡುಗು ಸಹಿತ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿದೆ.

ದಟ್ಟ ಮೋಡದಿಂದಾಗಿ ರನ್‌ವೇ ಸ್ಪಷ್ಟವಾಗಿ ಗೋಚರಿಸದೇ ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಎರಡು ವಿಮಾನಗಳು ಹಲವು ಸಮಯಗಳ ಕಾಲ ಆಗಸದಲ್ಲಿಯೇ ಗಿರಕಿ ಹೊಡೆದ್ದು ಪ್ರಯಾಣಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬಾರಿ ಮರಗಳು ಧರೆಗೆ ಉರುಳಿದ್ದು, ಹಲವು ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಸ್ಥಬ್ದಗೊಂಡಿತ್ತು.

ಇದನ್ನೂ ಓದಿ : ಮೇ 20ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ? ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಘೋಷಣೆ

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ರಾಜ್ಯದಲ್ಲಿ ಮಳೆಯ ಅಬ್ಬರ ಸದ್ಯಕ್ಕೆ ನಿಲ್ಲುವ ಲಕ್ಷಣಗಳಿಲ್ಲ. ಮೇ 17ರ ವರೆಗೆ ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಹೈ ಅಲರ್ಟ್‌ ಘೋಷಿಸಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಅಲ್ಲದೇ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಗಾಳಿಯ ವೇಗ ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories