IPL 2026: ಹಾರ್ದಿಕ್ ಪಾಂಡ್ಯ ಮುಂಬೈ ತಂಡದಿಂದ ಹೊರಗುಳಿದಿದ್ದು ಯಾಕೆ ? ಅಸಲಿ ಕಥೆ ಬಿಚ್ಚಿಟ್ಟ ಮುಂಬೈ ಇಂಡಿಯನ್ಸ್‌

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026 (IPL 2026) ಮುಂಬೈ ಇಂಡಿಯನ್ಸ್ (Mumbai Indians) ಪಾಲಿಗೆ ವರವಾಗಿಲ್ಲ. 5 ಬಾರಿಯ ಐಪಿಎಲ್‌ ಚಾಂಪಿಯನ್ಸ್‌ ತಂಡಕ್ಕೆ ಇದೀಗ ದೊಡ್ಡ ತಲೆನೋವು ಶುರುವಾಗಿದೆ. ತಂಡದ ಸ್ಟಾರ್‌ ಆಲ್‌ರೌಂಡರ್‌ ಮತ್ತು ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಅನುಪಸ್ಥಿತಿ ಕ್ರಿಕೆಟ್‌ ವಲಯದಲ್ಲಿ ಬಾರೀ ಚರ್ಚೆ ಶುರುವಾಗಿದೆ.

ipl 2026 : ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026 (IPL 2026) ಮುಂಬೈ ಇಂಡಿಯನ್ಸ್ (Mumbai Indians) ಪಾಲಿಗೆ ವರವಾಗಿಲ್ಲ. 5 ಬಾರಿಯ ಐಪಿಎಲ್‌ ಚಾಂಪಿಯನ್ಸ್‌ ತಂಡಕ್ಕೆ ಇದೀಗ ದೊಡ್ಡ ತಲೆನೋವು ಶುರುವಾಗಿದೆ. ತಂಡದ ಸ್ಟಾರ್‌ ಆಲ್‌ರೌಂಡರ್‌ ಮತ್ತು ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಅನುಪಸ್ಥಿತಿ ಕ್ರಿಕೆಟ್‌ ವಲಯದಲ್ಲಿ ಬಾರೀ ಚರ್ಚೆ ಶುರುವಾಗಿದೆ. ಈ ನಡುವಲ್ಲೇ ಮುಂಬೈ ಇಂಡಿಯನ್ಸ್‌ ತಂಡ ಅಸಲಿ ಕಥೆಯನ್ನು ಬಿಚ್ಚಿಟ್ಟಿದೆ.

ಮುಂಬೈ ಇಂಡಿಯನ್ಸ್‌ ತಂಡದಿಂದ ಹಾರ್ದಿಕ್ ಹೊರಗುಳಿದಿದ್ದಕ್ಕೆ ಅಸಲಿ ಕಾರಣವೇನು ?

ಪಂಜಾಬ್ ಕಿಂಗ್ಸ್ ತಂಡದ ವಿರುದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಪಂದ್ಯದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಹಿರಿಯ ವೇಗಿ ಶಾರ್ದೂಲ್ ಠಾಕೂರ್, ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ಹೊರಗೆ ಇಟ್ಟಿದ್ದು ಯಾಕೆ ಅನ್ನುವ ನಿಜವಾದ ಕಾರಣವನ್ನು ಬಹಿರಂಗ ಪಡಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಯಾವುದೇ ಭಿನ್ನಾಭಿಪ್ರಾಯದಿಂದ ಹೊರಗುಳಿದಿಲ್ಲ, ಬದಲಿಗೆ ಅವರು ತೀವ್ರ ಬೆನ್ನುನೋವಿನ ಸಮಸ್ಯೆಯಿಂದ (Severe Back Spasm) ಬಳಲುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ದದ ಪಂದ್ಯದ ವೇಳೆಯಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮುಂಬೈ ತಂಡದ ವೈದ್ಯಕೀಯ ಮಂಡಳಿಯು (Medical Team) ಅವರಿಗೆ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದೆ. ಆಡಳಿತ ಮಂಡಳಿಯು ಅವರ ಮೇಲಿನ ವರ್ಕ್‌ಲೋಡ್ ನಿರ್ವಹಣೆ ಮತ್ತು ಮುಂಬರುವ ಟಿ20 ಕ್ರಿಕೆಟ್ ಸರಣಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ.

Also Read : “ಬ್ಯಾಟ್‌ನಲ್ಲಿ ಚಿಪ್‌ ಇದೆ ಅಂದವರಿಗೆ ಬ್ಯಾಟ್‌ನಲ್ಲೇ ಉತ್ತರ ಕೊಟ್ಟ ವೈಭವ್​ ಸೂರ್ಯವಂಶಿ !

ಮತ್ತೆ ಮುಂಬೈ ಇಂಡಿಯನ್ಸ್‌ ತಂಡ ಸೇರ್ತಾರಾ ಹಾರ್ದಿಕ್‌ ಪಾಂಡ್ಯ ?

ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳಿಗೆ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರ್ಪಡೆ ಆಗೋದು ಡೌಟ್.‌ ಆದರೆ ಹಾರ್ದಿಕ್‌ ಪಾಂಡ್ಯ ಅವರು ಮುಂಬೈನ ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ನಲ್ಲಿ ಕಠಿಣ ನೆಟ್‌ ಪ್ರಾಕ್ಟಿಸ್‌ ನಡೆಸುತ್ತಿದ್ದಾರೆ. ಈ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಅದ್ರಲ್ಲೂ ರಾಯ್ಪುರದಲ್ಲಿ ನಡೆದ ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ತಂಡದ ಜೊತೆ ಇದ್ದರೂ ಕೂಡ ಅವರು ಫಿಟ್ನೆಸ್ ಟೆಸ್ಟ್ ಪಾಸ್ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಇದೇ ಕಾರಣದಿಂದಲೇ ಅವರು ಪಂಜಾಬ್‌ ವಿರುದ್ದ ಪಂದ್ಯಕ್ಕೂ ಮುನ್ನ ಹೊರಗುಳಿದಿದ್ದರು.

ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ದ ಪಂದ್ಯ ಆಡ್ತಾರಾ ಪಾಂಡ್ಯ ?

ಹಾರ್ದಿಕ್ ಪಾಂಡ್ಯ ಅವರ ಚೇತರಿಕೆ ವೇಗವಾಗಿ ಆಗುತ್ತಿದ್ದು, ಮುಂಬರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದ ವೇಳೆಗೆ ಅವರು ಸಂಪೂರ್ಣ ಫಿಟ್ ಆಗಲಿದ್ದಾರೆ. ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಕೆಕೆಆರ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಹಾರ್ದಿಕ್ ಕಣಕ್ಕಿಳಿಯುವ 50-50 ಸಾಧ್ಯತೆಗಳಿವೆ ಎಂದು ಕೋಚ್ ಮಹೇಲಾ ಜಯವರ್ಧನೆ ಹಾಗೂ ಶಾರ್ದೂಲ್ ಠಾಕೂರ್ ಇಬ್ಬರೂ ಸುಳಿವು ನೀಡಿದ್ದಾರೆ.

ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಜಸ್‌ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ನಾಯಕನ ಇಂಜುರಿ ವದಂತಿಗಳಿಗೆ ತೆರೆ ಬಿದ್ದಿರುವುದರಿಂದ ಮುಂಬೈ ಫ್ಯಾನ್ಸ್ ನಿರಾಳರಾಗಿದ್ದಾರೆ.

ipl 2026 mumbai indians reveals why hardik pandya not playing details

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories