ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ದುರಂತ: ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಎಲ್ಲದರ ನಡುವೆ ದೇಶದ ವಿವಿಧ ಭಾಗಗಳಲ್ಲಿ ನೀಟ್ ಪರೀಕ್ಷೆಗೆ ಅವಿರತ ಶ್ರಮ ನಡೆಸಿದ್ದ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಎಲ್ಲದರ ನಡುವೆ ದೇಶದ ವಿವಿಧ ಭಾಗಗಳಲ್ಲಿ ನೀಟ್ ಪರೀಕ್ಷೆಗೆ ಅವಿರತ ಶ್ರಮ ನಡೆಸಿದ್ದ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಇದು ಮಾತ್ರವಲ್ಲದೇ ನೀಟ್ ಪರೀಕ್ಷೆ ರದ್ದತಿಯಿಂದ ಮನನೊಂದು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬರು ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಶನಿವಾರ ಈ ಪ್ರಕರಣ ಬೆಳಕಿಗೆ ಬಂದಿದೆ. ಇದು ಮಾತ್ರವಲ್ಲದೇ ರಾಜಸ್ಥಾನದ ಪ್ರದೀಪ್ ಮೇಘ್ವಾಲ್ ಎಂಬ ವಿದ್ಯಾರ್ಥಿ ಕೂಡ ಇದೇ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಈತ ನೀಟ್ ಪರೀಕ್ಷೆಯಲ್ಲಿ 720 ಕ್ಕೆ 650 ಅಂಕ ನಿರೀಕ್ಷಿಸಿದ್ದ ಎನ್ನಲಾಗಿದೆ. ನೀಟ್ ಪರೀಕ್ಷೆ ರದ್ದತಿ ಬಳಿಕ ಈ ವಿದ್ಯಾರ್ಥಿ ತೀವ್ರವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ.

Also Read: ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ; ಮೂವರು ಸಾವು! 25 ಮಂದಿಗೆ ಗಂಭೀರ ಗಾಯ

ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ವಿಕಾ ಎಂಬ ವಿದ್ಯಾರ್ಥಿನಿ ಕೂಡ ಸಾವಿನ ಹಾದಿ ಆಯ್ಕೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ರಿತಿಕಾ ಮಿಶ್ರಾ ಕೂಡ ನೀಟ್ ಪರೀಕ್ಷೆ ರದ್ದತಿ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ.

NEET question paper leak tragedy Four students commit suicide

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories