ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: ಸಿಡಿಲಿಗೆ ಮೂವರು ಬಲಿ, ಶಿವಮೊಗ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮಿತಿಮೀರಿದೆ. ಉತ್ತರ ಕನ್ನಡ, ರಾಯಚೂರು ಧಾರವಾಡ ಭಾಗಗಳಲ್ಲಿ ಮಿತಿಮೀರಿ ಮಳೆಯಾಗಿದ್ದು ಅವಾಂತರಗಳೇ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಮೀನುಗಾರಿಕೆಗೆ ತೆರಳಿದ್ದ 35 ವರ್ಷದ ವಿನಾಯಕ ಖಾರ್ವಿ ಎಂಬವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮಿತಿಮೀರಿದೆ. ಉತ್ತರ ಕನ್ನಡ, ರಾಯಚೂರು ಧಾರವಾಡ ಭಾಗಗಳಲ್ಲಿ ಮಿತಿಮೀರಿ ಮಳೆಯಾಗಿದ್ದು ಅವಾಂತರಗಳೇ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಮೀನುಗಾರಿಕೆಗೆ ತೆರಳಿದ್ದ 35 ವರ್ಷದ ವಿನಾಯಕ ಖಾರ್ವಿ ಎಂಬವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಸಿಡಿಲು ಬಡಿದು ಮೂರು ಜಾನುವಾರುಗಳು ಮೃತಪಟ್ಟಿವೆ.

ಇತ್ತ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ 45 ವರ್ಷದ ಕರಿಯಪ್ಪ ಗೆನ್ನಾಕಿಹಾಳ್​ ಎಂಬವರು ಟ್ರ್ಯಾಕ್ಟರ್​ಗೆ ಗೊಬ್ಬರ ತುಂಬುತ್ತಿದ್ದ ಸಂದರ್ಭದಲ್ಲಿ ಸಿಡಿಲುಬಡಿದು ಮೃತಪಟ್ಟಿದ್ದಾರೆ.

ಇನ್ನು ಧಾರವಾಡ ಜಿಲ್ಲೆಯ ಕವಲಗೇರಿ ಎಂಬಲ್ಲಿಯೂ ಸಿಡಿಲ ಅಬ್ಬರಕ್ಕೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು 36 ವರ್ಷದ ಜಯಶ್ರೀ ಹನುಮಂತಪ್ಪ ಶಿರಸಂಗಿ ಎಂದು ಗುರುತಿಸಲಾಗಿದೆ. ಜಯಶ್ರೀ ಮತ್ತವರ ಪತಿ ಹನುಮಂತಪ್ಪ ಮಳೆ ಬರುವ ಸಂದರ್ಭದಲ್ಲಿ ಹೊಲದಲ್ಲಿ ಮೆಂತೆ ಸಸಿ ಕೀಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು ಜಯಶ್ರೀ ಸ್ಥಳದಲ್ಲೇ ಮೃತಪಟ್ಟರೆ ಹನುಮಂತಪ್ಪ ಗಾಯಗೊಂಡಿದ್ದಾರೆ.

Also Read: Karnataka Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ; ಸಿಲಿಕಾನ್ ಸಿಟಿಯಲ್ಲಿ ‘ಯೆಲ್ಲೋ ಅಲರ್ಟ್’

ಇನ್ನು ಶಿವಮೊಗ್ಗದಲ್ಲಿ ರೈಲ್ವೇ ಟ್ರ್ಯಾಕ್ ಮೇಲೆ ವಿದ್ಯುತ್ ಲೈನ್ ಬಿದ್ದ ಪರಿಣಾಮ ಕೆಲ ಸಮಯ ರೈಲು ಸಂಚಾರ ವ್ಯತ್ಯಯಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಅರಬ್ಬಿ ಸಮುದ್ರದಲ್ಲಿ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೇ 26ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

Pre-monsoon rains in the state Three killed by lightning train traffic disrupted in Shivamogga

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories