ದುಬಾರೆ ದುರಂತ: ಕೊನೆಗೂ ಎಚ್ಚೆತ್ತ ಅರಣ್ಯಾಧಿಕಾರಿಗಳು

ರಾಜ್ಯ ಅರಣ್ಯ ಇಲಾಖೆ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಕೊಡಗಿನ ಸುಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಪ್ರವಾಸಿ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ . ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಅರಣ್ಯ ಇಲಾಖೆ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಅರಣ್ಯ ಇಲಾಖೆಯ ನೂತನ ನಿಯಮದ ಅನ್ವಯ , ಇನ್ಮುಂದೆ ಪ್ರವಾಸಿಗರು ಆನೆಗಳ ತೀರಾ ಹತ್ತಿರ ಹೋಗುವಂತಿಲ್ಲ. ಕನಿಷ್ಠ 100 ಅಡಿ ದೂರದಲ್ಲಿ ನಿಂತು ಮಾತ್ರ ಆನೆಗಳನ್ನು ವೀಕ್ಷಿಸಬೇಕು. ಪ್ರವಾಸಿಗರು ತಮ್ಮ ಕೈಯಾರೆ ಆನೆಗಳಿಗೆ ಬಾಳೆಹಣ್ಣು, ಕಬ್ಬು ಸೇರಿದಂತೆ ಯಾವುದೇ ರೀತಿಯ ಆಹಾರವನ್ನು ತಿನ್ನಿಸುವಂತಿಲ್ಲ.

ಇದನ್ನೂ ಓದಿ : ಸಾರಿಗೆ ನೌಕರರ ಮುಷ್ಕರ ನಾಳೆಯಿಂದ ಆರಂಭ, ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!

ಯಾವುದೇ ಕಾರಣಕ್ಕೂ ಆನೆಗಳ ಸಮೀಪ ನಿಂತು ಸೆಲ್ಫಿ ಅಥವಾ ಫೋಟೋಗಳನ್ನು ತೆಗೆದುಕೊಳ್ಳಲು ಅವಕಾಶವಿಲ್ಲ.ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಸಂಪೂರ್ಣ ಸುರಕ್ಷತಾ ಕ್ರಮಗಳು ಜಾರಿಯಾಗುವವರೆಗೆ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ

ದುಬಾರೆ ಸೇರಿದಂತೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೂ ಈ ನಿಯಮಗಳು ತಕ್ಷಣದಿಂದಲೇ ಅನ್ವಯವಾಗಲಿವೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories