ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ‘ಯೆಲ್ಲೋ ಅಲರ್ಟ್’ ಘೋಷಣೆ
ಮುಂಗಾರು ಪೂರ್ವ ಮಾರುತಗಳ (Pre-Monsoon Winds) ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಜೊತೆಗೆ ಬಿರುಗಾಳಿ ಸಹಿತ ಬಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಸಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರ ಹೆಚ್ಚಾಗಿ ಇರಲಿದ್ದು 'ಯೆಲ್ಲೋ ಅಲರ್ಟ್' (Yellow Alert) ಘೋಷಿಸಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದೆ. ಮುಂಗಾರು ಪೂರ್ವ ಮಾರುತಗಳ (Pre-Monsoon Winds) ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಜೊತೆಗೆ ಬಿರುಗಾಳಿ ಸಹಿತ ಬಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಸಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರ ಹೆಚ್ಚಾಗಿ ಇರಲಿದ್ದು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿಗೆ ‘ಯೆಲ್ಲೋ ಅಲರ್ಟ್’
ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಅತ್ಯಂತ ಭಾರಿ ಮಳೆ ಆಗುವ ಸಾಧ್ಯತೆಯಿದೆ. ಮಳೆಯ ಆರ್ಭಟದ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
Also Read : ಮದ್ಯಪ್ರಿಯರಿಗೆ ಸಿಹಿಸುದ್ದಿ: ಕರ್ನಾಟಕದಲ್ಲಿ ಬಿಯರ್ ಬೆಲೆ ಭಾರೀ ಇಳಿಕೆ!
ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ ?
ರಾಜಧಾನಿ ಬೆಂಗಳೂರಿನಲ್ಲಿಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಜಿಟಿಜಿಟಿ ಅಥವಾ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಮಸ್ಯೆ ಎದುರಾಗಿದ್ದು, ಇಂದಿನ ಮಳೆ ಮುನ್ಸೂಚನೆಯು ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಉತ್ತರ ಒಳನಾಡಿನಲ್ಲೂ ವರಸೆ ಬದಲಿಸಿದ ವಾತಾವರಣ
ಮಲೆನಾಡು, ಕರಾವಳಿ ಮಾತ್ರವಲ್ಲದೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಉತ್ತರ ಕರ್ನಾಟಕದ ಜನತೆಗೆ ಈ ಪ್ರೀ-ಮೂನ್ಸೂನ್ ಮಳೆ ತಂಪೆರೆದಿದೆಯಾದರೂ, ಬಿರುಗಾಳಿ ಹಾಗೂ ಸಿಡಿಲಿನ ಭೀತಿ ಹೆಚ್ಚಾಗಿದೆ.
Also Read : ದೆವ್ವ ಹಿಡಿದಿದೆ ಎಂದುಕೊಂಡ ಬಾಲಕಿಗೆ ಮಗು ಜನನ: ಪ್ರೀತಿ ಹೆಸರಲ್ಲಿ ಟ್ರ್ಯಾಕ್ಟರ್ ಚಾಲಕನ ಮೋಸ ಬಯಲು
ಮುಂದಿನ ಕೆಲ ದಿನಗಳ ಕಾಲ ಇದೇ ವಾತಾವರಣ
ಮೇ 26ರ ಸುಮಾರಿಗೆ ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ಸಾಧ್ಯತೆ ಇರುವುದರಿಂದ, ಕರ್ನಾಟಕದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿಯ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.
ಸಾರ್ವಜನಿಕರಿಗೆ ಹವಾಮಾನ ಇಲಾಖೆಯ ಪ್ರಮುಖ ಸೂಚನೆಗಳು:
- ಮರ ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲಬೇಡಿ: ಬಿರುಗಾಳಿಯ ವೇಗ ಹೆಚ್ಚಿರುವುದರಿಂದ ಹಳೆಯ ಮರಗಳು ಹಾಗೂ ವಿದ್ಯುತ್ ಲೈನ್‌ಗಳ ಬಳಿ ಆಶ್ರಯ ಪಡೆಯಬೇಡಿ.
- ಸಿಡಿಲಿನ ಮುನ್ನೆಚ್ಚರಿಕೆ: ಗುಡುಗು-ಮಿಂಚಿನ ಸಂದರ್ಭದಲ್ಲಿ ಬಯಲು ಪ್ರದೇಶಗಳಲ್ಲಿ ಇರಬೇಡಿ, ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆದುಕೊಳ್ಳಿ.
- ಪ್ರಯಾಣದ ವೇಳೆ ಜಾಗ್ರತೆ: ಮಳೆಯಿಂದಾಗಿ ರಸ್ತೆಗಳು ಜಾರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ವೇಗಕ್ಕೆ ಬ್ರೇಕ್ ಹಾಕುವುದು ಸೂಕ್ತ.
- ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರೈತರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.
karnataka weather update heavy rain alert coastal malnad yellow alert



