ರಾಜ್ಯಸಭೆಗೆ ಕರಾವಳಿಯಿಂದ ಎರಡು ಆಕಾಂಕ್ಷಿಗಳ ಹೆಸರು: ಮಂಗಳೂರಿನ ನವೀನ್ ಡಿಸೋಜ, ಕುಮುಟಾದ ನಿವೇದಿತಾ ಆಳ್ವ ನಡುವೆ ಪೈಪೋಟಿ!
ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ವಿಭಾಗದಲ್ಲಿ ಮಂಗಳೂರಿನ ಹಿರಿಯ ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ ಹಾಗೂ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಿವೇದಿತಾ ಆಳ್ವ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ.
ಬೆಂಗಳೂರು: ರಾಜ್ಯಸಭೆಯ 3 ಕಾಂಗ್ರೆಸ್ ಸೀಟುಗಳ ಪೈಕಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲಾಗುವ ಸಂಭವ ಇದೆ ಎನ್ನಲಾಗುತ್ತಿದೆ. ಕಳೆದ ಬಾರಿ ಒಂದು ಸ್ಥಾನ ಮುಸ್ಲಿಮರಿಗೆ ಲಭ್ಯವಾಗಿತ್ತು.
ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ವಿಭಾಗದಲ್ಲಿ ಮಂಗಳೂರಿನ ಹಿರಿಯ ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ ಹಾಗೂ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಿವೇದಿತಾ ಆಳ್ವ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ.
ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು.
ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕ್ರಿಶ್ಚಿಯನ್ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ಈ ಪೈಕಿ ಕಾಂಗ್ರೆಸ್ ನ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ಹಾಗೂ ಹಿರಿಯ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿರುವ ನವೀನ್ ಡಿಸೋಜಾ ರವರ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.
ಈ ಬಾರಿಯ ಕೇರಳದ ಚುನಾವಣೆಯಲ್ಲಿ ಸಹ ನವೀನ್ ಡಿಸೋಜ ಕಾರ್ಯನಿರ್ವಹಣೆ ಪಕ್ಷದ ಹೈಕಮಾಂಡ್ ಗಮನ ಸೆಳೆದಿದೆ ಎನ್ನಲಾಗಿದೆ. ಈ ಮೊದಲು ತನಗೆ ನೀಡಿರುವ ಹಲವಾರು ಜವಾಬ್ದಾರಿಗಳನ್ನು ಎಲ್ಲಿಯೂ ಪ್ರಚಾರ ಬಯಸದೆ ಚಾಚು ತಪ್ಪದೇ ನಿರ್ವಹಿಸಿದ ಕೀರ್ತಿ ನವೀನ್ ಡಿಸೋಜ ರವರಿಗೆ ಇದೆ.
ಈ ಎಲ್ಲಾ ಅಂಶಗಳ ಆಧಾರದ ಮೇಲೆ ಈ ಬಾರಿ ಅವರನ್ನು ರಾಜ್ಯಸಭೆ ಕಳಿಸುವ ಬಗ್ಗೆ ಪಕ್ಷದ ಉನ್ನತ ಮೂಲಗಳು ಗಂಭೀರ ಚಿಂತನೆಯಲ್ಲಿದೆ ಎಂದು ತಿಳಿದು ಬಂದಿದೆ. ನಿವೇದಿತಾ ಆಳ್ವ ಈ ಮೊದಲು ವಿಧಾನಸಭಾ ಚುನಾವಣೆಯಲ್ಲಿ ಕುಮಟಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಅವರು ಹಿರಿಯ ಕಾಂಗ್ರೆಸ್ ರಾಜಕಾರಣಿ ಮಾರ್ಗರೇಟ್ ಅಳ್ವ ರವರ ಪುತ್ರರಾಗಿದ್ದಾರೆ.
ಈ ಮೊದಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಈ ಬಾರಿ ಯುವ ಮುಖಗಳಿಗೆ ಆದ್ಯತೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ನೆಲೆಯಲ್ಲಿ ನವೀನ್ ಡಿಸೋಜಾ ಹಾಗೂ ನಿವೇದಿತಾ ಆಳ್ವ ಹೆಸರು ಮುಂಚೂಣಿಗೆ ಬಂದಿದೆ.
ಇನ್ನೊಂದು ಸ್ಥಾನ ಯಾರ ಪಾಲಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಕಾಂಗ್ರೆಸ್ ತನ್ನ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಸುಲಭವಾಗಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಕಾಂಗ್ರೆಸ್ ನ ಶಾಸಕರಗಳ ಬಲ 3 ರಾಜ್ಯಸಭೆಗೆ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.
ರಾಜ್ಯಸಭಾ ಚುನಾವಣೆ ಜೂನ್ 18ರಂದು ನಡೆಯಲಿದ್ದು, ಜೂನ್ ಎಂಟಕ್ಕೆ ನಾಮಿನೇಷನ್ ಸಲ್ಲಿಸಲು ಅಂತಿಮ ದಿನಾಂಕವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಈ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.



