ಪರೀಕ್ಷೆಯಿಲ್ಲದೇ ಪಂಜಾಬ್‌ ಆಂಡ್‌ ಸಿಂಧ್‌ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್‌ಶಿಪ್‌ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಪಂಜಾಬ್‌ ಆಂಡ್‌ ಸಿಂಧ ಬ್ಯಾಂಕ್‌ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಮೂಲಕ ಪಂಜಾಬ್‌ ಆಂಡ್‌ ಸಿಂಧ್‌ ಬ್ಯಾಂಕ್‌ ಒಟ್ಟು 635 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ

ಗ್ರಾಜುಯೇಟ್‌ ಯುವಕ ಮತ್ತು ಯುವತಿಯರಿಗೆ ಸರ್ಕಾರಿ ಬ್ಯಾಂಕ್‌ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ. ಪಂಜಾಬ್‌ ಆಂಡ್‌ ಸಿಂಧ ಬ್ಯಾಂಕ್‌ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಮೂಲಕ ಪಂಜಾಬ್‌ ಆಂಡ್‌ ಸಿಂಧ್‌ ಬ್ಯಾಂಕ್‌ ಒಟ್ಟು 635 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಜೂನ್‌ 6 ರ ಒಳಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ತೆರಳಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಆಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನಿಮ್ಮಲ್ಲಿ ಈ ಕೆಳಗಿನ ಅರ್ಹತಾ ಮಾನದಂಡಗಳು ಇದೆಯಾ ಎಂದು ಪರೀಶೀಲಿಸಿಕೊಳ್ಳಿ.

ವಯೋಮಿತಿ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳಾಗಿದೆ ಮತ್ತು ಗರಿಷ್ಠ ವಯಸ್ಸು 28 ವರ್ಷಗಳಿಗೆ ಮೀರಿರಬಾರದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವಿದ್ಯಾರ್ಹತೆ

ಈ ನೇಮಕಾತಿಗೆ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳು ₹200 ಶುಲ್ಕವನ್ನು ಪಾವತಿಸಬೇಕು. ಆದರೆ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಅಭ್ಯರ್ಥಿಗಳು ₹100 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದು.

ಇದನ್ನೂ ಓದಿ: ಯುಪಿಎಸ್‌ಸಿ ಕಂಬೈನ್ಡ್‌ ಡಿಫೆನ್ಸ್‌ ಸರ್ವೀಸಸ್‌ 2 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ : ದೇಶಸೇವೆ ಮಾಡಲು ಸುವರ್ಣಾವಕಾಶ

ಆಯ್ಕೆ ಪ್ರಕ್ರಿಯೆ ಹೇಗೆ?

ಪಂಜಾಬ್‌ ಆಂಡ್‌ ಸಿಂಧ್‌ ಬ್ಯಾಂಕ್ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಪರೀಕ್ಷೆಯಲ್ಲಿದೇ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೆರಿಟ್‌ ಪಟ್ಟಿ ತಯಾರಿಸಲಾಗುತ್ತದೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಅಯ್ಕೆ ನಡೆಯುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12,300 ರೂ ಸ್ಟೈಫಂಡ್‌ ದೊರೆಯುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

  • ಅರ್ಜಿ ನಮೂನೆಯನ್ನು ಭರ್ತಿ ಮಾಡಲು, ಮೊದಲು ibpsreg.ibps.in/psbeoaapr26/ ಪೋರ್ಟಲ್‌ಗೆ ಹೋಗಿ.
  • ಅಲ್ಲಿ ಮುಖಪುಟದಲ್ಲಿ ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ ಆಯ್ದುಕೊಳ್ಳಿ.
  • ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರು ನೋಂದಾಯಿಸಿ.
  • ಇತರ ವಿವರಗಳು, ಸಹಿ ಮತ್ತು ಛಾಯಾಚಿತ್ರವನ್ನು (ನೇಮಕಾತಿ ಪ್ರಕಟಣೆಯಲ್ಲಿ ಉಲ್ಲೇಖಿಸಿರುವ ಸೈಜ್‌ನ ಫೋಟೋ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ಅಂತಿಮವಾಗಿ, ಫಾರ್ಮ್ ಅನ್ನು ಇನ್ನೊಮ್ಮೆ ಪರಿಶೀಲಿಸಿ ಸಲ್ಲಿಸಿ. ನಂತರ ಅದರ ಮುದ್ರಣವನ್ನು ತೆಗೆದುಕೊಳ್ಳಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories