ಮತ್ತೆ ಏರಿದ ಪೆಟ್ರೋಲ್-ಡೀಸೆಲ್ ದರ: 10 ದಿನದಲ್ಲಿ 4ನೇ ಬಾರಿ ಬೆಲೆ ಶಾಕ್
ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಅಕ್ಷರಶಃ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಇಂಧನ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯ ಲೆಕ್ಕಾಚಾರವೇ ಉಲ್ಟಂಪಲ್ಟಾ ಆಗಿದೆ.
ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಅಕ್ಷರಶಃ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಇಂಧನ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯ ಲೆಕ್ಕಾಚಾರವೇ ಉಲ್ಟಂಪಲ್ಟಾ ಆಗಿದೆ. ಇದರಿಂದ ಕೇವಲ 10 ದಿನಗಳ ಅಂತರದಲ್ಲಿ ಬರೋಬ್ಬರಿ 4ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರಿದೆ.
ಪೆಟ್ರೋಲ್ ಪ್ರತಿ ಲೀಟರ್ಗೆ 2.61 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ಗೆ 2.71 ರೂಪಾಯಿ ತಲುಪಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ದೆಹಲಿಯಲ್ಲಿ 99.51 ರೂಪಾಯಿ ಇದ್ದ ಪೆಟ್ರೋಲ್ ದರ ಪ್ರತಿ ಲೀಟರ್ಗೆ 102.12 ರೂಪಾಯಿ ಆಗಿದೆ. ಇತ್ತ 92.49 ರೂಪಾಯಿ ಇದ್ದ ಡೀಸೆಲ್ ದರ 95.20 ರೂಪಾಯಿ ಆಗಿದೆ.
Also Read: ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಸೋಂಕು! ವಾರದಲ್ಲೇ 12,700 ಪ್ರಕರಣ
ಮೇ 15ರಂದು ಸುದೀರ್ಘ ಅವಧಿಯ ಬಳಿಕ ಮೊದಲ ಬಾರಿಗೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕಂಡಿತ್ತು. ಇದಾಗಿ ಒಂದು ವಾರದ ಬಳಿಕ ಮತ್ತೊಮ್ಮೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಕಂಡಿತ್ತು. ಇದೀಗ ಮತ್ತೊಮ್ಮೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.
Petrol-diesel prices rise again 4th price shock in 10 days



